2 Chronicles 17:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇವರೆಲ್ಲಾ ಯೆಹೂದದ ಜನರಿಗೆ ಯೆಹೋವನ ಧರ್ಮೋಪದೇಶ ಪುಸ್ತಕದಿಂದ ಆತನ ಕಟ್ಟಳೆ ವಿಧಿನಿಯಮಗಳನ್ನು ಯೆಹೂದದ ಪಟ್ಟಣಗಳಲ್ಲೆಲ್ಲಾ ಸಂಚರಿಸಿ ಕಲಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ಯೆಹೋವನ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಯೆಹೂದ ದೇಶದ ಪಟ್ಟಣದಲ್ಲೆಲ್ಲಾ ಸಂಚಾರ ಮಾಡಿ ಜನರಿಗೆ ಬೋಧಿಸಿದರು.
Kannada BSI Bible 2016
ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಕರ್ತನ ನ್ಯಾಯಪ್ರಮಾಣದ ಪುಸ್ತಕ ಇತ್ತು; ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ ಜನರಿಗೆ ಬೋಧಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಯೆಹೋವಧರ್ಮಶಾಸ್ತ್ರವನ್ನು ತೆಗೆದುಕೊಂಡು ಯೆಹೂದ ದೇಶದಲ್ಲೆಲ್ಲಾ ಸಂಚಾರಮಾಡಿ ಜನರಿಗೆ ಬೋಧಿಸಿದರು.
Kannada Bible (KNCL) BSI 2016
ಇವರು ಸರ್ವೇಶ್ವರನ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಜುದೇಯ ನಾಡಿನಲ್ಲೆಲ್ಲಾ ಸಂಚಾರಮಾಡಿ ಜನರಿಗೆ ಬೋಧಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಯೆಹೋವ ದೇವರ ನಿಯಮದ ಗ್ರಂಥ ಇತ್ತು. ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ, ಜನರಿಗೆ ಬೋಧಿಸಿದರು.