2 Chronicles 18:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚಿದ್ಕೀಯನು ಕೆನಾನನ ಮಗ. ಚಿದ್ಕೀಯನು ಕಬ್ಬಿಣದ ಕೊಂಬುಗಳನ್ನು ತಯಾರಿಸಿ, “ಇದು ಯೆಹೋವನ ನುಡಿ. ಈ ಕಬ್ಬಿಣದ ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ನಾಶಮಾಡುವೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದನು.
Kannada BSI Bible 2016
ಆಗ ಕೆನಾನನ ಮಗನಾದ ಚಿದ್ಕೀ ಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು --ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವ ವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ [ತಲೆಗೆ ಕಟ್ಟಿಕೊಂಡು] ಬಂದು - ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬದಾಗಿ ಯೆಹೋವನು ಹೇಳುತ್ತಾನೆ ಎಂದನು.
Kannada Bible (KNCL) BSI 2016
ಅವರಲ್ಲಿ ಕೆನಾನನ ಮಗ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀವು ಸಿರಿಯಾದವರನ್ನು ಇರಿದು ಕೊಂದುಹಾಕುವಿರಿ, ಎಂಬುದಾಗಿ ಸರ್ವೇಶ್ವರ ಹೇಳುತ್ತಾರೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕೆನಾನನ ಮಗನಾದ ಚಿದ್ಕೀಯನು, “ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು, ‘ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.