2 Chronicles 18:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲಿದ್ದ ಪ್ರವಾದಿಗಳೆಲ್ಲರೂ ಅದನ್ನೇ ನುಡಿದರು. ಅವರು, “ನೀನು ರಾಮೋತ್‌ಗಿಲ್ಯಾದಿಗೆ ಹೋಗು. ನಿನಗಲ್ಲಿ ಜಯವಾಗುವದು. ಯೆಹೋವನು ಅರಾಮ್ಯರನ್ನು ಸೋಲಿಸುವಂತೆ ನಿನಗೆ ಸಹಾಯಮಾಡುವನು” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ ಗಿಲ್ಯಾದಿಗೆ ಹೋಗು; ನೀನು ಜಯಶಾಲಿಯಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು.
Kannada BSI Bible 2016
ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನಲ್ಲಿರುವ ರಾಮೋ ತಿಗೆ ಹೋಗಿ ಜಯಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು - ರಾಮೋತ್‍ಗಿಲ್ಯಾದಿಗೆ ಹೋಗು; ನೀನು ಕೃತಾರ್ಥನಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು.
Kannada Bible (KNCL) BSI 2016
ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್‍ಗಿಲ್ಯಾದಿಗೆ ಹೋಗಿ, ನೀವು ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಅದನ್ನು ಅರಸರ ಕೈಗೆ ಒಪ್ಪಿಸುವರು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ, “ಗಿಲ್ಯಾದಿನ ರಾಮೋತಿಗೆ ಹೋಗಿ ಜಯ ಹೊಂದು. ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.