2 Chronicles 18:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೀಕಾಯೆಹುವಿನ ಬಳಿಗೆ ಹೋದ ರಾಜನ ಸೇವಕನು ಅವನಿಗೆ, “ಮೀಕಾಯೆಹುವೇ ಕೇಳು, ಎಲ್ಲಾ ಪ್ರವಾದಿಗಳೂ ರಾಜನು ಗೆಲ್ಲುವನು ಎಂದು ಪ್ರವಾದಿಸುತ್ತಿದ್ದಾರೆ. ಅದನ್ನೇ ನೀನು ಹೇಳಿ ಅರಸನಿಗೆ ಶುಭವನ್ನು ಹಾರೈಸಬೇಕು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ತಿಳಿಸುತ್ತಿದ್ದಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ತಿಳಿಸು” ಎಂದು ಹೇಳಿದನು.
Kannada BSI Bible 2016
ಆದರೆ ವಿಾಕಾಯೆಹುವನ್ನು ಕರೆಯುವದಕ್ಕೆ ಹೋದ ಸೇವಕನು ಅವನಿಗೆ--ಇಗೋ, ಪ್ರವಾದಿಗಳ ಮಾತುಗಳು ಒಂದೇ ಒಪ್ಪಿಗೆಯಿಂದ ಅರಸನಿಗೆ ಒಳ್ಳೇ ದನ್ನು ಪ್ರಕಟಿಸುತ್ತವೆ; ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೀಕಾಯೆಹುವನ್ನು ಕರೆಯುವದಕ್ಕೆ ಹೋದ ದೂತನು ಅವನಿಗೆ - ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಿರುತ್ತಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು ಎಂದು ಹೇಳಿದನು.
Kannada Bible (KNCL) BSI 2016
ಇತ್ತ ಮೀಕಾಯೆಹುವನ್ನು ಕರೆಯಲು ಬಂದಿದ್ದ ದೂತನು, “ನೋಡಿ ಎಲ್ಲ ಪ್ರವಾದಿಗಳು ಏಕ ಮನಸ್ಸಿನಿಂದ ಅರಸರಿಗೆ ಶುಭವನ್ನೇ ಮುಂತಿಳಿಸುತ್ತಿರುತ್ತಾರೆ. ದಯವಿಟ್ಟು ನೀವೂ ಅವರಂತೆ ಶುಭವನ್ನೇ ಮುಂತಿಳಿಸಿ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮೀಕಾಯನನ್ನು ಕರೆಯಲು ಹೋದ ದೂತನು ಅವನಿಗೆ, “ನೋಡು, ಎಲ್ಲ ಪ್ರವಾದಿಗಳು ಏಕಮನಸ್ಸಿನಿಂದ ಅರಸನಿಗೆ ಒಳ್ಳೆಯದನ್ನೇ ಪ್ರವಾದಿಸಿದ್ದಾರೆ. ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೆಯ ಮಾತು ಆಡು,” ಎಂದನು.