2 Chronicles 18:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೀಕಾಯೆಹುವು ಅಹಾಬನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್‌ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೊರಡಬಹುದೋ?” ಎಂದು ವಿಚಾರಿಸಿದಾಗ ಮೀಕಾಯೆಹುವು, “ಹೋಗಿ, ಯುದ್ಧಮಾಡು. ದೇವರು ಅವರನ್ನು ನಿನ್ನ ಕೈಗಳಿಗೆ ಒಪ್ಪಿಸುವನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ? ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ? ಹೋಗಬಾರದೋ? ಎಂದು ಕೇಳಿದನು. ಅವನು, ಹೋಗಬಹುದು, ಕೃತಾರ್ಥನಾಗಿ ಬರುವಿರಿ, ವೈರಿಗಳು ನಿನ್ನ ಕೈವಶವಾಗುವರು” ಎಂದು ಹೇಳಿದನು.
Kannada BSI Bible 2016
ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ--ವಿಾಕಾಯೆಹುವೇ, ನಾವು ರಾಮೋತ್‌ ಗಿಲ್ಯಾದಿಗೆ ಯುದ್ಧಕ್ಕೆ ಹೋಗಲೋ ಇಲ್ಲವೆ ನಾವು ಹೋಗುವದು ಬೇಡವೋ? ಅಂದನು. ಆಗ ಅವನು--ಹೋಗಿ ಜಯಹೊಂದಿರಿ, ಅವರು ನಿಮ್ಮ ಕೈಯಲ್ಲಿ ಒಪ್ಪಿಸಲ್ಪಡುವರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅರಸನ ಬಳಿಗೆ ಬಂದಾಗ ಅರಸನು - ಮೀಕಾಯೆಹುವೇ, ನಾವು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವನು - ಹೋಗಬಹುದು, ಕೃತಾರ್ಥರಾಗಿ ಬರುವಿರಿ; ವೈರಿಗಳು ನಿಮ್ಮ ಕೈವಶರಾಗುವರು ಎಂದು ಹೇಳಿದನು.
Kannada Bible (KNCL) BSI 2016
ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವನು “ಹೋಗಬಹುದು, ಕೃತಾರ್ಥರಾಗಿ ಬರುವಿರಿ; ವೈರಿಗಳು ನಿಮ್ಮ ಕೈವಶವಾಗುವರು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅರಸನ ಬಳಿಗೆ ಬಂದಾಗ, ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. ಆಗ ಅವನು, “ಹೋಗಿ ಜಯ ಹೊಂದಿರಿ. ಅವರು ನಿಮ್ಮ ಕೈವಶರಾಗುವರು,” ಎಂದನು.