2 Chronicles 18:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಸ್ರೇಲಿನ ಜನರೆಲ್ಲರೂ ಬೆಟ್ಟಪ್ರದೇಶಗಳಲ್ಲಿ ಚದರಿರುವದನ್ನು ಕಂಡೆನು. ಅವರು ಕುರುಬನಿಲ್ಲದ ಕುರಿಗಳಂತಿದ್ದರು. ಕರ್ತನು ಹೇಳಿದ್ದೇನೆಂದರೆ, ‘ಅವರಿಗೆ ನಾಯಕರಿಲ್ಲ, ಆದ್ದರಿಂದ ಸುರಕ್ಷಿತವಾಗಿ ಮನೆಗೆ ಹಿಂದಿರುಗಲಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು, “ಇಸ್ರಾಯೇಲರೆಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚದರಿ ಹೋದದ್ದನ್ನು ಕಂಡೆನು; ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’” ಎಂಬುದಾಗಿ ಉತ್ತರಕೊಟ್ಟನು.
Kannada BSI Bible 2016
ಅದ ಕ್ಕವನು--ಕಾಯುವವನಿಲ್ಲದ ಕುರಿಗಳ ಹಾಗೆ ಬೆಟ್ಟಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲ್ಯರನ್ನು ಕಂಡೆನು. ಆಗ ಕರ್ತನು--ಇವರಿಗೆ ಯಜಮಾನನು ಇಲ್ಲ; ಪ್ರತಿ ಮನುಷ್ಯನು ತನ್ನ ಮನೆಗೆ ಸಮಾಧಾನ ವಾಗಿ ತಿರುಗಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು - ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರ ಕೊಟ್ಟನು.
Kannada Bible (KNCL) BSI 2016
ಆಗ ಅವನು, “ಇಸ್ರಯೇಲರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆ; ಆಗ ಸರ್ವೇಶ್ವರ ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಯೊಳಗೆ ಹೋಗಲಿ ಎಂದರು,” ಎಂಬುದಾಗಿ ಉತ್ತರ ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಮೀಕಾಯನು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳ ಮೇಲೆ ಚದರಿಹೋದದ್ದನ್ನು ಕಂಡೆನು. ಆಗ ಯೆಹೋವ ದೇವರು, ‘ಇವರಿಗೆ ಯಜಮಾನನು ಇಲ್ಲ. ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂದಿರುಗಿ ಹೋಗಲಿ,’ ಎಂಬುದಾಗಿ ಹೇಳಿದರು,” ಎಂದನು.