2 Chronicles 18:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಮೋತ್‌ಗಿಲ್ಯಾದಿನ ಮೇಲೆ ಯುದ್ಧಮಾಡಲು ಅಹಾಬನನ್ನು ಯಾರು ಮರುಳುಗೊಳಿಸುವರು? ಯಾಕೆಂದರೆ ಅಲ್ಲಿ ಅವನು ಸಾಯಬೇಕು’ ಎಂದು ಯೆಹೋವನು ಕೇಳಿದಾಗ ಅಲ್ಲಿ ನಿಂತಿದ್ದವರು ಬೇರೆಬೇರೆ ವಿಧಾನವನ್ನು ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಇಸ್ರಾಯೇಲರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸ ಬಲ್ಲಿರಿ?’ ಎಂದು ಕೇಳಿದಾಗ, ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.
Kannada BSI Bible 2016
ಆಗ ಕರ್ತನು--ಇಸ್ರಾ ಯೇಲಿನ ಅರಸನಾದ ಅಹಾಬನು ಹೋಗಿ ರಾಮೋತ್‌ ಗಿಲ್ಯಾದಿನಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ತನ್ನ ಹತ್ತಿರ ನಿಂತವರನ್ನು - ಇಸ್ರಾಯೇಲ್ಯರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್‍ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರಿಸುವಿರಿ ಎಂದು ಕೇಳಿದಾಗ ಒಬ್ಬನು ಈ ತರವಾಗಿಯೂ ಇನ್ನೊಬ್ಬನು ಆ ತರವಾಗಿಯೂ ಉತ್ತರಕೊಟ್ಟರು.
Kannada Bible (KNCL) BSI 2016
ಸರ್ವೇಶ್ವರ ತಮ್ಮ ಹತ್ತಿರ ನಿಂತವರನ್ನು, ‘ಇಸ್ರಯೇಲರ ಅರಸ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್‍ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರೇಪಿಸಬಲ್ಲಿರಿ?’ ಎಂದು ಕೇಳಿದಾಗ ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು, ‘ಇಸ್ರಾಯೇಲಿನ ಅರಸನಾದ ಅಹಾಬನು ಹೋಗಿ ಗಿಲ್ಯಾದಿನ ರಾಮೋತಿನಲ್ಲಿ ಬೀಳುವ ಹಾಗೆ ಅವನನ್ನು ಮರುಳುಗೊಳಿಸುವವನು ಯಾರು?’ ಎಂದರು. “ಒಬ್ಬನು ಒಂದು ವಿಧವಾಗಿಯೂ ಮತ್ತೊಬ್ಬನು ಇನ್ನೊಂದು ವಿಧವಾಗಿಯೂ ಹೇಳುತ್ತಿದ್ದರು.