2 Chronicles 18:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಆತ್ಮವು, ‘ನಾನು ಹೋಗಿ ಅಹಾಬನ ಪ್ರವಾದಿಗಳಿಗೆ ಸುಳ್ಳುಹೇಳುವ ಆತ್ಮವಾಗುತ್ತೇನೆ’ ಎಂದು ಹೇಳಿತು. ಅದಕ್ಕೆ ಆತನು ‘ಸರಿ, ಹಾಗೆಯೇ ಮಾಡು. ನೀನು ನಿನ್ನ ಕಾರ್ಯದಲ್ಲಿ ಸಫಲವಾಗುವೆ’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳ ಒಳಗೆ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಯೆಹೋವನು ಅದಕ್ಕೆ, ‘ಹೋಗಿ ಅದರಂತೆ ಮಾಡು; ಅವನನ್ನು ಪ್ರೇರೇಪಿಸು ನೀನು ಸಫಲನಾಗುವಿ’ ಎಂದನು.
Kannada BSI Bible 2016
ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದು--ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳು ಆತ್ಮವಾಗಿರುವೆನು ಅಂದಿತು. ಅದಕ್ಕೆ ಆತನು--ನೀನು ಅವನನ್ನು ಮರುಳು ಗೊಳಿಸುವಿ, ಮತ್ತು ಜಯಿಸುವಿ; ಹೊರಟುಹೋಗಿ ಹಾಗೆ ಮಾಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ - ಹೋಗಿ ಅದರಂತೆ ಮಾಡು; ಅವನನ್ನು ಪ್ರೇರಿಸಿ ಸಫಲನಾಗುವಿ ಅಂದನು.
Kannada Bible (KNCL) BSI 2016
‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲ ಪ್ರವಾದಿಗಳಲ್ಲಿ ಸೇರುವೆನು’, ಎಂದು ಉತ್ತರಕೊಟ್ಟಿತು. ಆಗ ಸರ್ವೇಶ್ವರ ಅದಕ್ಕೆ, ‘ಹೋಗಿ ಅದರಂತೆಯೇ ಮಾಡು; ಅವನನ್ನು ಪ್ರೇರೇಪಿಸಿ ಸಫಲನಾಗುವೆ’, ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಯೆಹೋವ ದೇವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ, ಹೊರಟುಹೋಗಿ ಹಾಗೆ ಮಾಡು,’ ಎಂದರು.