2 Chronicles 18:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಮೀಕಾಯೆಹುವು, “ಅಹಾಬನೇ, ನೀನು ರಣರಂಗದಿಂದ ಸುರಕ್ಷಿತವಾಗಿ ಬಂದರೆ ಯೆಹೋವನು ನನ್ನ ಮೂಲಕ ಮಾತನಾಡಲಿಲ್ಲವೆಂದು ತಿಳಿದುಕೋ. ಜನರೇ, ನನ್ನ ಮಾತನ್ನು ಕೇಳಿ ನೆನಪಿನಲ್ಲಿಡಿರಿ” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ, ನಾನು ನುಡಿದದ್ದು ಯೆಹೋವನ ಮಾತಲ್ಲ” ಎಂದು ಹೇಳಿ, “ಮಹಾ ಜನರೇ, ನನ್ನ ಮಾತನ್ನು ಗಮನದಲ್ಲಿಟ್ಟುಕೊಳ್ಳಿರಿ” ಎಂದು ಕೂಗಿ ಹೇಳಿದನು.
Kannada BSI Bible 2016
ಅದಕ್ಕೆ ವಿಾಕಾಯೆಹುವುನೀನು ಸಮಾಧಾನದಿಂದ ಬಂದೇ ಬರುವದಾದರೆ ಕರ್ತನು ನನ್ನ ಮುಖಾಂತರ ಮಾತನಾಡಲಿಲ್ಲ ಎಂದು ಹೇಳಿ--ಜನರೇ, ನೀವೆಲ್ಲರು ಕೇಳಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೀಕಾಯೆಹುವು ಅರಸನಿಗೆ - ನೀನು ಸುರಕ್ಷಿತನಾಗಿ ಬರುವದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲ ಎಂದು ಹೇಳಿ - ಎಲ್ಲಾ ಜನರೇ, ಇದನ್ನು ಕೇಳಿರಿ ಎಂದು ಕೂಗಿದನು.
Kannada Bible (KNCL) BSI 2016
ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತವಾಗಿ ಬರುವುದಾದರೆ, ನಾನು ನುಡಿದದ್ದು ಸರ್ವೇಶ್ವರನ ಮಾತಲ್ಲ,” ಎಂದು ಹೇಳಿ, “ಮಹಾಜನರೇ, ನನ್ನ ಮಾತನ್ನು ಗಮನದಲ್ಲಿಡಿ,” ಎಂದು ಕೂಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ, ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು.