2 Chronicles 18:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಥಾಧಿಪತಿಗಳು ಯೆಹೋಷಾಫಾಟನನ್ನು ನೋಡಿದಾಗ ಅವನೇ ಅಹಾಬನೆಂದೆಣಿಸಿ ಅವನ ಮೇಲೆ ದಾಳಿ ನಡೆಸಿದರು. ಆದರೆ ಯೆಹೋಷಾಫಾಟನು ಗಟ್ಟಿಯಾಗಿ ಕೂಗಿಕೊಂಡನು. ಆಗ ಯೆಹೋವನು ಅವನಿಗೆ ಸಹಾಯಮಾಡಿ ರಥಾಧಿಪತಿಗಳು ಅವನಿಂದ ಬೇರೆ ಕಡೆಗೆ ತಿರುಗುವಂತೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ನೆನೆದು, ಅವನಿಗೆ ವಿರುದ್ಧವಾಗಿ ಯುದ್ಧ ಮಾಡುವುದಕ್ಕೆ ಸುತ್ತಿಕೊಂಡರು. ಆಗ ಯೆಹೋಷಾಫಾಟನು ಯೆಹೋವನನ್ನು ಸಹಾಯಕ್ಕಾಗಿ ಕೂಗಿದನು. ಆಗ ದೇವರಾದ ಯೆಹೋವನು ಅವನ ನೆರವಿಗೆ ಬಂದು, ಶತ್ರುಗಳನ್ನು ಅವನ ಕಡೆಯಿಂದ ಹೊರಟು ಹೋಗುವಂತೆ ಮಾಡಿದನು.
Kannada BSI Bible 2016
ಆದದರಿಂದ ರಥಗಳ ಅಧಿಪತಿ ಗಳು ಯೆಹೋಷಾಫಾಟನನ್ನು ನೋಡಿದಾಗ--ನಿಶ್ಚ ಯವಾಗಿ ಇವನೇ ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ಕರ್ತನು ಅವ ನಿಗೆ ಸಹಾಯಕೊಟ್ಟನು. ಇದಲ್ಲದೆ ದೇವರು ಅವರನ್ನು ಅವನ ಕಡೆಯಿಂದ ತೊಲಗಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲ್ಯರ ಅರಸನೆಂದು ನೆನಸಿ ಅವನಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ದೇವರಾದ ಯೆಹೋವನು ಅವನಿಗೆ ನೆರವಾಗಿ ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದನು.
Kannada Bible (KNCL) BSI 2016
ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಯೇಲರ ಅರಸನೆಂದು ನೆನಸಿ, ಅವನಿಗೆ ವಿರುದ್ಧ ಯುದ್ಧಮಾಡುವುದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಂಡನು. ಆಗ ದೇವರಾದ ಸರ್ವೇಶ್ವರ ಅವನಿಗೆ ನೆರವಾಗಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ರಥಗಳ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ, “ಇವನೇ ಇಸ್ರಾಯೇಲಿನ ಅರಸನು,” ಎಂದು ಹೇಳಿ ಅವನ ಸಂಗಡ ಯುದ್ಧಮಾಡುವುದಕ್ಕೆ ತಿರುಗಿಕೊಂಡರು. ಆದರೆ ಯೆಹೋಷಾಫಾಟನು ಕೂಗಿಕೊಂಡನು. ಆಗ ಯೆಹೋವ ದೇವರು ಅವನಿಗೆ ಸಹಾಯಮಾಡಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.