2 Chronicles 18:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಒಬ್ಬ ಸಿಪಾಯಿಯು ಬಿಲ್ಲು ತೆಗೆದು ಬಾಣವನ್ನು ಹೂಡಿ ಗುರಿಯಿಲ್ಲದೆ ಹೊಡೆದಾಗ ಆ ಬಾಣವು ಬಂದು ಇಸ್ರೇಲರ ರಾಜನಾದ ಅಹಾಬನಿಗೆ ತಾಗಿತು. ಅವನ ಕವಚದ ಸಂದಿನಿಂದ ಅವನ ದೇಹದೊಳಗೆ ಹೊಕ್ಕಿತು. ಆಗ ಅವನು ತನ್ನ ರಥವನ್ನೋಡಿಸುವ ರಾಹುತನಿಗೆ, “ರಥವನ್ನು ಹಿಂದಕ್ಕೆ ತಿರುಗಿಸಿ ನನ್ನನ್ನು ರಣರಂಗದಿಂದ ಹೊರಕ್ಕೆ ಕರೆದುಕೊಂಡು ಹೋಗು. ನಾನು ಗಾಯಗೊಂಡಿದ್ದೇನೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಾಮ್ಯರ ಒಬ್ಬ ಸೈನಿಕನು ಗುರಿಯಿಡದೆ ಸುಮ್ಮನೆ ಒಂದು ಬಾಣವನ್ನೆಸೆಯಲು, ಆ ಬಾಣವು ಇಸ್ರಾಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ತಾಕಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.
Kannada BSI Bible 2016
ಆದರೆ ಒಬ್ಬನು ಗುರಿಯಿಡದೆ ಬಿಲ್ಲಿಗೆ ಬಾಣ ವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದು ಗಳಲ್ಲಿ ಹೊಡೆದನು. ಆದದರಿಂದ ಅವನು ತನ್ನ ಸಾರಥಿಗೆ--ನೀನು ನಿನ್ನ ಕೈಯನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆ ತೆಗೆದುಕೊಂಡು ಹೋಗು; ನಾನು ಗಾಯಪಟ್ಟಿದ್ದೇನೆ ಅಂದನು.ಆ ದಿನ ಯುದ್ಧ ಪ್ರಬಲವಾದದರಿಂದ ಇಸ್ರಾಯೇಲಿನ ಅರ ಸನು ಸಾಯಂಕಾಲದ ವರೆಗೂ ಅರಾಮ್ಯರಿಗೆ ಎದುರಾಗಿ ರಥದಲ್ಲೇ ಆತುಕೊಂಡಿದ್ದು ಸೂರ್ಯನು ಅಸ್ತಮಿಸಿ ದಾಗ ಸತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿನಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ - ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ ಎಂದು ಹೇಳಿದನು.
Kannada Bible (KNCL) BSI 2016
ಸಿರಿಯಾದವರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆದನು. ಆ ಬಾಣ ಇಸ್ರಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ತಾಕಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿ ಇದೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅರಾಮ್ಯರ ಸೈನಿಕನೊಬ್ಬನು ಗುರಿ ಇಡದೆ ಬಿಲ್ಲಿಗೆ ಬಾಣವನ್ನೇರಿಸಿ ಹೊಡೆಯಲು, ಅದು ಇಸ್ರಾಯೇಲಿನ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆದ್ದರಿಂದ ಅವನು ತನ್ನ ರಥ ನಡೆಸುವವನಿಗೆ, “ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆಗೆ ತೆಗೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ,” ಎಂದನು.