2 Chronicles 18:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ದಿವಸ ಯುದ್ಧವು ಬಲುಘೋರವಾಗಿ ನಡೆಯಿತು. ಅಹಾಬನು ರಥದ ಕಂಬಕ್ಕೆ ಒರಗಿ ಸಂಜೆಯ ತನಕ ಹಾಗೆಯೇ ಅರಾಮ್ಯರ ಎದುರು ನಿಂತುಕೊಂಡಿದ್ದನು. ಸೂರ್ಯಾಸ್ತಮಾನವಾದಾಗ ಅಹಾಬನು ಸತ್ತನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಇಸ್ರಾಯೇಲರ ಅರಸನು ಸಾಯಂಕಾಲದವರೆಗೂ ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡಿರಬೇಕಾಯಿತು. ಸೂರ್ಯಾಸ್ತಮಾನವಾದಾಗ ಅವನು ಸತ್ತನು.
Kannada BSI Bible 2016
ಆ ದಿನ ಯುದ್ಧ ಪ್ರಬಲವಾದದರಿಂದ ಇಸ್ರಾಯೇಲಿನ ಅರ ಸನು ಸಾಯಂಕಾಲದ ವರೆಗೂ ಅರಾಮ್ಯರಿಗೆ ಎದುರಾಗಿ ರಥದಲ್ಲೇ ಆತುಕೊಂಡಿದ್ದು ಸೂರ್ಯನು ಅಸ್ತಮಿಸಿ ದಾಗ ಸತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಆ ದಿವಸ ಯುದ್ಧವು ಬಹು ಘೋರವಾಗಿದ್ದದರಿಂದ ಇಸ್ರಾಯೇಲ್ಯರ ಅರಸನು ಸಾಯಂಕಾಲದವರೆಗೂ ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡಿದ್ದು ಸೂರ್ಯಾಸ್ತಮಾನವಾದಾಗ ಸತ್ತನು.
Kannada Bible (KNCL) BSI 2016
ಆ ದಿವಸ ಯುದ್ಧ ಬಹುಘೋರವಾಗಿತ್ತು. ಆದ್ದರಿಂದ ಇಸ್ರಯೇಲರ ಅರಸನು ಸಾಯಂಕಾಲದವರೆಗೂ ಸಿರಿಯಾದವರ ಎದುರಿಗೆ ತನ್ನ ರಥದಲ್ಲೇ ಆತುಕೊಂಡಿರಬೇಕಾಯಿತು.ಸೂರ್ಯಾಸ್ತಮಾನವಾದಾಗ ಅವನು ಸತ್ತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸವೆಲ್ಲಾ ಯುದ್ಧವು ಬಹು ಘೋರವಾದದ್ದರಿಂದ ಇಸ್ರಾಯೇಲಿನ ಅರಸನಾದ ಅಹಾಬನು ಸಾಯಂಕಾಲದವರೆಗೂ ಅರಾಮ್ಯರಿಗೆ ಎದುರಾಗಿ ರಥದಲ್ಲಿಯೇ ಆತುಕೊಂಡು ನಿಂತಿದ್ದನು, ಸೂರ್ಯನು ಅಸ್ತಮಿಸಿದಾಗ ಅವನು ಮರಣಹೊಂದಿದನು.