2 Chronicles 18:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಅಹಾಬನು ನಾನೂರು ಮಂದಿ ಪ್ರವಾದಿಗಳನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಾವು ರಾಮೋತ್‌ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೊರಡಬೇಕೋ ಬೇಡವೋ?” ಎಂದು ಕೇಳಿದಾಗ ಆ ಪ್ರವಾದಿಗಳು ಅಹಾಬನಿಗೆ, “ಹೋಗು, ದೇವರು ರಾಮೋತ್‌ಗಿಲ್ಯಾದನ್ನು ಸೋಲಿಸುವಂತೆ ಮಾಡುವನು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಹೋಗಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು.
Kannada BSI Bible 2016
ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿ ಗಳನ್ನು ಕೂಡಿಸಿ ಅವರಿಗೆ--ನಾವು ಗಿಲ್ಯಾದಿನಲ್ಲಿರುವ ರಾಮೋತಿಗೆ ಯುದ್ಧಕ್ಕೆ ಹೋಗಬಹುದೋ ಬಾರದೋ ಅಂದನು. ಅದಕ್ಕವರು--ಹೋಗು; ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಇಸ್ರಾಯೇಲ್ಯರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ - ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವರು - ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು.
Kannada Bible (KNCL) BSI 2016
ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, “ನಾವು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?\, ಎಂದು ಕೇಳಿದನು. ಅವರು, “ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವರು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. ಅದಕ್ಕವರು, “ಹೋಗು, ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.