2 Chronicles 18:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಅರಸನಾದ ಅಹಾಬನು, “ಇನ್ನೂ ಒಬ್ಬನು ಇದ್ದಾನೆ. ನಾವು ಅವನಿಂದ ಯೆಹೋವನನ್ನು ವಿಚಾರಿಸಬಹುದು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯಾಕೆಂದರೆ ನನ್ನ ವಿಷಯವಾಗಿ ಯೆಹೋವನಿಂದ ಯಾವ ಒಳ್ಳೆಯ ಸಂದೇಶವನ್ನೂ ಅವನು ಕೊಡುವದಿಲ್ಲ. ನನ್ನ ಬಗ್ಗೆ ಯಾವಾಗಲೂ ಕೆಟ್ಟದ್ದನ್ನೇ ನುಡಿಯುತ್ತಾನೆ. ಅವನು ಇಮ್ಲನ ಮಗನಾದ ಮೀಕಾಯೆಹುವು” ಅಂದನು. ಅದಕ್ಕೆ ಯೆಹೋಷಾಫಾಟನು, “ಅಹಾಬನೇ, ನೀನು ಹಾಗೆ ಹೇಳಬಾರದು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು, “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸ ಬಲ್ಲವನಾದ ಒಬ್ಬ ಪ್ರವಾದಿ ಇದ್ದಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನು ನುಡಿಯದೆ, ಅಶುಭವನ್ನೇ ನುಡಿಯುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗನ್ನಬಾರದು” ಎಂದನು.
Kannada BSI Bible 2016
ಆಗ ಇಸ್ರಾಯೇ ಲಿನ ಅರಸನು ಯೊಹೋಷಾಫಾಟನಿಗೆ -- ನಾವು ಕರ್ತನಿಂದ ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬವನು ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ; ಕೆಟ್ಟದ್ದನ್ನೇ, ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಅನ್ನದಿರಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು - ಅರಸನು ಹಾಗೆ ಹೇಳಬಾರದು ಅಂದನು.
Kannada Bible (KNCL) BSI 2016
“ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿ ಇರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗೆನ್ನಬಾರದು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.