2 Chronicles 18:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರ ಅರಸನಾದ ಅಹಾಬನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ತಮ್ಮ ರಾಜವಸ್ತ್ರಗಳನ್ನು ಧರಿಸಿದ್ದರು. ಅವರು ಸಮಾರ್ಯ ಪಟ್ಟಣದ ಮುಂಭಾಗದ ಬಾಗಿಲಿನೆದುರು ಸಿಂಹಾಸನಗಳ ಮೇಲೆ ಕುಳಿತಿದ್ದರು. ಆ ನಾನೂರು ಮಂದಿ ಪ್ರವಾದಿಗಳು ಅವರ ಮುಂದೆ ನಿಂತುಕೊಂಡು ಪ್ರವಾದಿಸುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು. ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಪ್ರವಾದಿಸತೊಡಗಿದರು.
Kannada BSI Bible 2016
ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೋಷಾಫಾಟನೂ ವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯದ ಬಾಗಲಿನ ಮುಂದೆ ಬೈಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯಪಟ್ಟಣದ ಹೆಬ್ಬಾಗಲಿನ ಹತ್ತಿರವಿರುವ ಬೈಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕೂತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತಾಡುತ್ತಾ ಇದ್ದರು.
Kannada Bible (KNCL) BSI 2016
ಇಸ್ರಯೇಲರ ಅರಸನೂ ಯೆಹೂದ್ಯರ ಅರಸ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರಿಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡರು; ಎಲ್ಲ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತಾಡತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು, ಸಮಾರ್ಯದ ಬಾಗಿಲಿನ ಮುಂದೆ ಬಯಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತುಕೊಂಡಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸುತ್ತಿದ್ದರು.