2 Chronicles 19:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಿನ್ನಲ್ಲಿ ಕೆಲವಾರು ಒಳ್ಳೆಯ ವಿಷಯಗಳಿವೆ. ನೀನು ಈ ದೇಶದೊಳಗಿದ್ದ ಅಶೇರಕಂಬಗಳನ್ನು ತೆಗೆದುಹಾಕಿಸಿದೆ; ಯೆಹೋವನನ್ನು ಹಿಂಬಾಲಿಸಲು ನಿನ್ನ ಹೃದಯದಲ್ಲಿ ತೀರ್ಮಾನಿಸಿದೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ” ಎಂಬುದಾಗಿ ಹೇಳಿದನು.
Kannada BSI Bible 2016
ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ನೀನು ದೇಶದೊಳಗಿಂದ ಅಶೇರವಿಗ್ರಹಸ್ತಂಭಗಳನ್ನು ತೆಗೆದುಹಾಕಿ ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟದ್ದರಿಂದ ನಿನ್ನಲ್ಲಿ ಸುಶೀಲತೆಯೂ ಉಂಟೆಂದು ತಿಳಿದುಬಂತು ಎಂಬದಾಗಿ ಹೇಳಿದನು.
Kannada Bible (KNCL) BSI 2016
ಆದರೂ ನೀವು ನಾಡಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದುಹಾಕಿದ್ದೀರಿ. ಸರ್ವೇಶ್ವರನ ಭಕ್ತಿ ನಿಮ್ಮಲ್ಲಿ ಬೇರೂರಿದೆ, ನಿಮ್ಮಲ್ಲಿ ಸುಶೀಲತೆ ಉಂಟೆಂದು ತಿಳಿದುಬಂದಿದೆ,” ಎಂಬುದಾಗಿ ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನೀನು ದೇಶದಿಂದ ಅಶೇರ ಸ್ತಂಭಗಳನ್ನು ತೆಗೆದುಹಾಕಿ, ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ, ನಿನ್ನಲ್ಲಿ ಉತ್ತಮವಾದ ಕಾರ್ಯಗಳು ತೋರಿಬಂದಿವೆ,” ಎಂದನು.