2 Chronicles 2:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಜನರು ಮರಗಳನ್ನು ಕಡಿದು ಸಾಗಿಸುವ ಕಾರ್ಯಕ್ಕೆ ನಾನು ಒಂದು ಲಕ್ಷದ ಇಪ್ಪತ್ತೈದು ಸಾವಿರ ಕ್ವಿಂಟಾಲ್ ಗೋಧಿಯನ್ನೂ ಒಂದು ಲಕ್ಷದ ಇಪ್ಪತ್ತೈದು ಸಾವಿರ ಕ್ವಿಂಟಾಲ್ ಜವೆಗೋಧಿಯನ್ನೂ ಒಂದು ಲಕ್ಷದ ಹದಿನೈದು ಸಾವಿರ ಲೀಟರ್ ದ್ರಾಕ್ಷಾರಸವನ್ನೂ ಒಂದು ಲಕ್ಷದ ಹದಿನೈದು ಸಾವಿರ ಲೀಟರ್ ಎಣ್ಣೆಯನ್ನೂ ಕೊಡುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರ ಕಡಿಯುವ ನಿನ್ನ ಆಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಗೋದಿಯನ್ನೂ, ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಜವೆಗೋದಿಯನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ದ್ರಾಕ್ಷಾರಸವನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ಎಣ್ಣೆಯನ್ನೂ ಕೊಡುವೆನು” ಎಂದನು.
Kannada BSI Bible 2016
ಇಗೋ, ನಾನು ಮರಗಳನ್ನು ಕಡಿಯುವ ನಿನ್ನ ಸೇವಕರಿಗೆ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಸಾವಿರ ಅಳತೆ ಜವೆಗೋಧಿ ಯನ್ನೂ ಇಪ್ಪತ್ತು ಸಾವಿರ ಅಳತೆ ದ್ರಾಕ್ಷಾರಸವನ್ನೂ ಇಪ್ಪತ್ತು ಸಾವಿರ ಅಳತೆ ಎಣ್ಣೆಯನ್ನೂ ಕೊಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರಕಡಿಯುವ ನಿನ್ನ ಆಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ ಗೋದಿ, ಇಪ್ಪತ್ತು ಸಾವಿರ ಕೋರ್ ಜವೆಗೋದಿ, ಇಪ್ಪತ್ತು ಸಾವಿರ ಬತ್ ದ್ರಾಕ್ಷಾರಸ, ಇಪ್ಪತ್ತು ಸಾವಿರ ಬತ್ ಎಣ್ಣೆ ಇವುಗಳನ್ನು ಕೊಡುವೆನೆಂದು ಹೇಳಿಸಿದನು.
Kannada Bible (KNCL) BSI 2016
ಮರ ಕಡಿಯುವ ನಿನ್ನ ಆಳುಗಳಿಗಾಗಿ ಎರಡು ಸಾವಿರ ಮೆಟ್ರಿಕ್ ಟನ್ ಗೋದಿ, ಎರಡು ಸಾವಿರ ಮೆಟ್ರಿಕ್ ಟನ್ ಜವೆಗೋದಿ, ನಾಲ್ಕು ಲಕ್ಷ ಲೀಟರ್ ದ್ರಾಕ್ಷಾರಸ ಹಾಗೂ ನಾಲ್ಕು ಲಕ್ಷ ಲೀಟರ್ ಎಣ್ಣೆ ಇವುಗಳನ್ನು ಕೊಡುವೆನು,” ಎಂದು ಹೇಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರ ಕಡಿಯುವ ನಿನ್ನ ಸೇವಕರಿಗಾಗಿ, ಎರಡು ಸಾವಿರ ಟನ್ ಗೋಧಿಯನ್ನೂ, ಮೂರು ಸಾವಿರ ಟನ್ ಜವೆಗೋಧಿಯನ್ನೂ, ನಾಲ್ಕು ಲಕ್ಷ ನಲವತ್ತು ಸಾವಿರ ಲೀಟರ್ ದ್ರಾಕ್ಷಾರಸವನ್ನೂ, ನಾಲ್ಕು ಲಕ್ಷ ನಲವತ್ತು ಸಾವಿರ ಲೀಟರ್ ಎಣ್ಣೆಯನ್ನೂ ಕೊಡುವೆನು,” ಎಂದು ಹೇಳಿಸಿದನು.