2 Chronicles 2:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ, ಆತನು ಭೂಪರಲೋಕಗಳನ್ನು ಉಂಟುಮಾಡಿದನು. ಅರಸನಾದ ದಾವೀದನಿಗೆ ಒಬ್ಬ ಜ್ಞಾನವುಳ್ಳ ಮಗನನ್ನು ಅನುಗ್ರಹಿಸಿದ್ದಾನೆ. ನಿನಗೆ ಜ್ಞಾನವೂ ತಿಳುವಳಿಕೆಯೂ ಇರುವದರಿಂದ ನೀನು ದೇವಾಲಯವನ್ನು ಕಟ್ಟುವೆ ಮತ್ತು ನಿನಗೂ ಒಂದು ಅರಮನೆಯನ್ನು ಕಟ್ಟುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಇಸ್ರಾಯೇಲ್ ದೇವರಾದ ಯೆಹೋವನು ತನಗೋಸ್ಕರ ದೇವಾಲಯವನ್ನೂ, ರಾಜನಿಗೋಸ್ಕರ ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ, ಜ್ಞಾನ, ವಿವೇಕವುಳ್ಳ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟಿದ್ದರಿಂದ ಆತನಿಗೆ ಸ್ತೋತ್ರವಾಗಲಿ.
Kannada BSI Bible 2016
ಇದಲ್ಲದೆ ಹಿರಾಮನು ಕರ್ತ ನಿಗೋಸ್ಕರ ಮನೆಯನ್ನೂ ತನ್ನ ರಾಜ್ಯಕ್ಕೋಸ್ಕರ ಮನೆ ಯನ್ನೂ ಕಟ್ಟಿಸುವದಕ್ಕೆ ಅರಸನಾದ ದಾವೀದನಿಗೆ ಜ್ಞಾನವುಳ್ಳಂಥ ಬುದ್ಧಿಯನ್ನು ಗ್ರಹಿಕೆಯನ್ನು ತಿಳು ಕೊಂಡಂಥ ಮಗನನ್ನು ಕೊಟ್ಟು, ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂಮ್ಯಾಕಾಶಗಳನ್ನುಂಟುಮಾಡಿದ ಇಸ್ರಾಯೇಲ್‍ದೇವರಾದ ಯೆಹೋವನು ತನಗೋಸ್ಕರ ದೇವಾಲಯವನ್ನೂ ರಾಜನಿಗೋಸ್ಕರ ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ ಜ್ಞಾನವಿವೇಕಗಳುಳ್ಳ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟದರಿಂದ ಆತನಿಗೆ ಸ್ತೋತ್ರವಾಗಲಿ.
Kannada Bible (KNCL) BSI 2016
ಭೂಮ್ಯಾಕಾಶಗಳನ್ನು ಉಂಟುಮಾಡಿದ ಇಸ್ರಯೇಲ್ ದೇವರಾದ ಸರ್ವೇಶ್ವರ ತಮಗಾಗಿ ಒಂದು ದೇವಾಲಯವನ್ನೂ ರಾಜನಿಗೋಸ್ಕರ ಒಂದು ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ, ಜ್ಞಾನ ಹಾಗೂ ವಿವೇಕಗಳುಳ್ಳ ಒಬ್ಬ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟಿದ್ದಾರೆ; ಅವರಿಗೆ ಸ್ತೋತ್ರವಾಗಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಹೀರಾಮನು, “ಯೆಹೋವ ದೇವರಿಗೋಸ್ಕರ ಆಲಯವನ್ನೂ ತನ್ನ ರಾಜ್ಯಕ್ಕೋಸ್ಕರ ಅರಮನೆಯನ್ನೂ ಕಟ್ಟಿಸುವುದಕ್ಕೆ ಅರಸನಾದ ದಾವೀದನಿಗೆ ಬುದ್ಧಿ ವಿವೇಚನೆಯುಳ್ಳ ಒಬ್ಬ ಮಗನನ್ನು ಕೊಟ್ಟಿದ್ದಾರೆ; ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ.