2 Chronicles 2:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ಅವುಗಳನ್ನು ಜೋಡಿಸಿ ತೆಪ್ಪಗಳನ್ನಾಗಿ ಮಾಡಿ ಸಮುದ್ರದಲ್ಲಿ ತೇಲಿಬಿಡುವೆವು. ಅವು ಯೊಪ್ಪಕ್ಕೆ ತಲುಪಿದಾಗ ನೀನು ಅವುಗಳನ್ನು ಶೇಖರಿಸಿ ಬೇಕಾದ ಕಡೆಗೆ ರವಾನಿಸು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ, ಸಮುದ್ರ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ಅಲ್ಲಿಂದ ನೀನು ಅವುಗಳನ್ನು ಯೆರೂಸಲೇಮಿಗೆ ತರಿಸಿಕೊಳ್ಳಬಹುದು” ಎಂಬುದಾಗಿ ಉತ್ತರ ಕೊಟ್ಟನು.
Kannada BSI Bible 2016
ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತಕ್ಕೊಂಡು ಬರುತ್ತೇವೆ; ನೀನು ಅವುಗ ಳನ್ನು ಯೆರೂಸಲೇಮಿಗೆ ಒಯ್ಯಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ಕಳುಹಿಸುವೆವು; ಅಲ್ಲಿಂದ ನೀನು ಅವುಗಳನ್ನು ಯೆರೂಸಲೇವಿುಗೆ ತರಿಸಿಕೊಳ್ಳಬಹುದು ಎಂಬದಾಗಿ ಉತ್ತರಕೊಟ್ಟನು.
Kannada Bible (KNCL) BSI 2016
ನಾವಾದರೋ ತಮಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು, ತೆಪ್ಪಗಳಾಗಿ ಕಟ್ಟಿ, ಸಮುದ್ರಮಾರ್ಗವಾಗಿ ಜೊಪ್ಪಕ್ಕೆ ಕಳುಹಿಸುವೆವು; ಅಲ್ಲಿಂದ ನೀವು ಅವುಗಳನ್ನು ಜೆರುಸಲೇಮಿಗೆ ತರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ನೀನು ಅವುಗಳನ್ನು ಯೆರೂಸಲೇಮಿಗೆ ಒಯ್ಯಬಹುದು.”