2 Chronicles 2:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಸೊಲೊಮೋನನು ತನ್ನ ರಾಜ್ಯದಲ್ಲಿದ್ದ ಎಲ್ಲಾ ಪರದೇಶಸ್ಥರನ್ನು ಲೆಕ್ಕಿಸಿದನು. ಸೊಲೊಮೋನನ ತಂದೆಯಾದ ದಾವೀದನು ಮಾಡಿದ ಜನಗಣತಿಯ ನಂತರ ಈ ಜನಗಣತಿಯನ್ನು ಮಾಡಲಾಯಿತು. ಅವರಲ್ಲಿ ಒಂದು ಲಕ್ಷದ ಐವತ್ತ ಮೂರು ಸಾವಿರದ ಆರುನೂರು ಮಂದಿ ಪರದೇಶದವರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಸೊಲೊಮೋನನು ತನ್ನ ತಂದೆಯಾದ ದಾವೀದನು ಮಾಡಿಸಿದ ಜನಗಣತಿಯ ಆಧಾರದ ಮೇರೆಗೆ, ಇಸ್ರಾಯೇಲ್ ದೇಶದಲ್ಲಿ ಪ್ರವಾಸಿಗಳಾಗಿದ್ದ ಎಲ್ಲಾ ಅನ್ಯಜನರನ್ನು ಲೆಕ್ಕ ಮಾಡಿದಾಗ ಒಂದು ಲಕ್ಷದ ಐವತ್ತು ಮೂರು ಸಾವಿರದ ಆರುನೂರು ಮಂದಿ ಸಿಕ್ಕಿದರು.
Kannada BSI Bible 2016
ಸೊಲೊ ಮೋನನು ಇಸ್ರಾಯೇಲ್‌ ದೇಶದಲ್ಲಿದ್ದ ಅನ್ಯದೇಶ ಸ್ಥರನ್ನು ಲೆಕ್ಕಿಸಿದನು; ತನ್ನ ತಂದೆಯಾದ ದಾವೀದನು ಅವರನ್ನು ಲೆಕ್ಕಿಸಿದ ತರುವಾಯ ತಾನೂ ಲೆಕ್ಕಿಸಿದನು; ಅವರು ಲಕ್ಷದ ಐವತ್ತಮೂರು ಸಾವಿರದ ಆರುನೂರು ಮಂದಿ ಕಂಡುಬಂದರು.ಅವರಲ್ಲಿ ಎಪ್ಪತ್ತು ಸಾವಿರ ಮಂದಿಯನ್ನು ಹೊರೆಹೊರುವದಕ್ಕೂ ಎಂಭತ್ತು ಸಾವಿರ ಮಂದಿಯನ್ನು ಬೆಟ್ಟದಲ್ಲಿ ಕಲ್ಲು ಕಡಿಯುವ ದಕ್ಕೂ ಮೂರು ಸಾವಿರದ ಆರು ನೂರು ಮಂದಿ ಯನ್ನು ಕೆಲಸದವರ ಮೇಲೆ ಮೇಲ್ವಿಚಾರಣೆಗಾಗಿಯೂ ಇರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಸೊಲೊಮೋನನು ತನ್ನ ತಂದೆಯಾದ ದಾವೀದನು ಮಾಡಿಸಿದ ಖಾನೇಷುಮಾರಿಯ ಆಧಾರದಿಂದ ಇಸ್ರಾಯೇಲ್ ದೇಶದಲ್ಲಿ ಪ್ರವಾಸಿಗಳಾಗಿದ್ದ ಎಲ್ಲಾ ಅನ್ಯಜನರನ್ನು ಲೆಕ್ಕಿಸಲು ಒಂದು ಲಕ್ಷ ಐವತ್ತಮೂರು ಸಾವಿರದ ಆರುನೂರು ಮಂದಿ ಸಿಕ್ಕಿದರು.
Kannada Bible (KNCL) BSI 2016
ಸೊಲೊಮೋನನು, ತನ್ನ ತಂದೆ ದಾವೀದನು ಮಾಡಿಸಿದ ಜನಗಣತಿಯ ಆಧಾರದಿಂದ, ಇಸ್ರಯೇಲ್ ನಾಡಿನಲ್ಲಿ ಪ್ರವಾಸಿಗಳಾಗಿದ್ದ ಎಲ್ಲಾ ಅನ್ಯಜನರನ್ನು ಲೆಕ್ಕಿಸಿದನು. ಅವರು ಒಂದು ಲಕ್ಷ ಐವತ್ತಮೂರು ಸಾವಿರದ ಆರುನೂರು ಮಂದಿ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಸೊಲೊಮೋನನು ತನ್ನ ತಂದೆ ದಾವೀದನು ಮಾಡಿಸಿದ ಜನಗಣತಿಯ ಆಧಾರದಿಂದ, ಇಸ್ರಾಯೇಲ್ ದೇಶದಲ್ಲಿದ್ದ ಪ್ರವಾಸಿಗಳಾಗಿದ್ದ ಇತರ ಜನರ ಜನಗಣತಿ ಮಾಡಿಸಿದ ನಂತರ, ಇತರ ಜನರ ಒಟ್ಟು ಸಂಖ್ಯೆ 1,53,600 ಮಂದಿ ಇದ್ದರು.