2 Chronicles 2:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ದೇವರಾದ ಯೆಹೋವನ ನಾಮದ ಘನತೆಗಾಗಿ ನಾನು ಒಂದು ದೇವಾಲಯವನ್ನು ಕಟ್ಟಲಿರುವೆನು. ಆತನ ಸನ್ನಿಧಿಯಲ್ಲಿ ನಿತ್ಯವೂ ಧೂಪವನ್ನು ಹಾಕುವೆವು; ವಿಶೇಷ ಮೇಜಿನ ಮೇಲೆ ಪವಿತ್ರವಾದ ರೊಟ್ಟಿಗಳನ್ನಿಡುವೆವು. ಪ್ರತಿ ಮುಂಜಾನೆ ಮತ್ತು ಸಾಯಂಕಾಲಗಳಲ್ಲಿ, ಸಬ್ಬತ್ ದಿನಗಳಲ್ಲಿ ಮತ್ತು ಅಮಾವಾಸ್ಯೆ ದಿನಗಳಲ್ಲಿ ಯೆಹೋವನು ಆಜ್ಞಾಪಿಸಿದ ಹಬ್ಬಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುವೆವು. ಇಸ್ರೇಲಿನ ಜನರು ನಿತ್ಯಕಾಲಕ್ಕೂ ಇವುಗಳನ್ನು ಅನುಸರಿಸಬೇಕೆಂದು ದೇವರು ನೇಮಿಸಿರುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ, ಇಸ್ರಾಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ, ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೂ, ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವುದಕ್ಕೂ, ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಯ ದಿನಗಳಲ್ಲಿಯೂ, ನಮ್ಮ ದೇವರಾದ ಯೆಹೋವನ ಹಬ್ಬಗಳಲ್ಲಿಯೂ ಇವುಗಳಲ್ಲಿ ಸರ್ವಾಂಗಹೋಮವನ್ನರ್ಪಿಸುವುದಕ್ಕೂ ಈ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.
Kannada BSI Bible 2016
ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ ಇಸ್ರಾಯೇಲ್ಯರಿಗಿರುವ ಶಾಶ್ವತನಿಯಮದ ಪ್ರಕಾರ ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವದಕ್ಕೂ ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವದಕ್ಕೂ ಪ್ರಾತಃಕಾಲ, ಸಾಯಂಕಾಲ, ಸಬ್ಬತ್‍ದಿನ, ಅಮಾವಾಸ್ಯೆ, ನಮ್ಮ ದೇವರಾದ ಯೆಹೋವನ ಜಾತ್ರೆ ಇವುಗಳಲ್ಲಿ ಸರ್ವಾಂಗ ಹೋಮವನ್ನರ್ಪಿಸುವದಕ್ಕೂ ಆ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.
Kannada Bible (KNCL) BSI 2016
ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವುದಕ್ಕೂ, ದೇವಸನ್ನಿಧಿಗೆ ಪರಿಮಳ ಧೂಪವನ್ನು ಅರ್ಪಿಸುವ ನಿತ್ಯ ಸಮ್ಮುಖದ ರೊಟ್ಟಿಗೋಸ್ಕರವೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಇಸ್ರಾಯೇಲರಿಗೆ ನಿರಂತರವಾಗಿರಲು ನೇಮಿಸಿದ ನಮ್ಮ ದೇವರಾದ ಯೆಹೋವ ದೇವರ ಹಬ್ಬಗಳಲ್ಲಿಯೂ, ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ನಮ್ಮ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.