2 Chronicles 20:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಜೆಕರ್ಯನ ಮಗನಾದ ಯೆಹಜೀಯೇಲನ ಮೇಲೆ ಯೆಹೋವನ ಆತ್ಮನು ಬಂದನು. ಜೆಕರ್ಯನು ಬೆನಾಯನ ಮಗ. ಬೆನಾಯನು ಯೆಗೀಯೇಲನ ಮಗ. ಯೆಗೀಯೇಲನು ಮತ್ತನ್ಯನ ಮಗ. ಯೆಹಜೀಯೇಲನು ಲೇವಿಯನಾಗಿದ್ದನು ಮತ್ತು ಆಸಾಫನ ಸಂತತಿಯವನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ಸಮೂಹದೊಳಗೆ ಆಸಾಫನ ವಂಶದವನಾದ ಲೇವಿಯನೂ, ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗನೂ, ಬೆನಾಯನ ಮೊಮ್ಮಗನೂ, ಜೆಕರ್ಯನ ಮಗನೂ ಆದ ಯಹಜೀಯೇಲನ ಮೇಲೆ ಯೆಹೋವನ ಆತ್ಮವು ಬಂದಿತು.
Kannada BSI Bible 2016
ಆಗ ಸಭೆಯ ಮಧ್ಯದಲ್ಲಿ ಆಸಾಫನ ಮಕ್ಕಳಲ್ಲಿ ಒಬ್ಬನಾದಂಥ, ಲೇವಿಯನಾದಂಥ, ಮತ್ತನ್ಯನ ಮಗ ನಾದ ಯೆಗೀಯೇಲನ ಮಗನಾದ ಬೆನಾಯನ ಮಗ ನಾದ ಜೆಕರೀಯನ ಮಗನಾದ ಯಹಜೀಯೇಲನ ಮೇಲೆ ಕರ್ತನ ಆತ್ಮನು ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ಸಮೂಹದೊಳಗೆ ಆಸಾಫನ ವಂಶದವನಾದ ಲೇವಿಯನೂ ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗನೂ ಬೆನಾಯನ ಮೊಮ್ಮಗನೂ ಜೆಕರ್ಯನ ಮಗನೂ ಆದ ಯಹಜೀಯೇಲನ ಮೇಲೆ ಯೆಹೋವನ ಆತ್ಮವು ಬಂದಿತು.
Kannada Bible (KNCL) BSI 2016
ಆಗ ಆ ಸಮೂಹದೊಳಗೆ ಆಸಾಫನ ವಂಶದವನೂ ಲೇವಿಯನೂ ಆದ ಯಹಜೀಯೇಲನ ಮೇಲೆ ಸರ್ವೇಶ್ವರನ ಆತ್ಮ ಇಳಿದು ಬಂದಿತು. ಇವನು ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗ, ಬೆನಾಯನ ಮೊಮ್ಮಗ, ಹಾಗೂ ಜೆಕರ್ಯನ ಮಗ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಜನಸಮೂಹದ ಮಧ್ಯದಲ್ಲಿ ಆಸಾಫನ ವಂಶದಲ್ಲಿ ಒಬ್ಬನಾದಂಥ ಲೇವಿಯನಾದ ಯಹಜಿಯೇಲನ ಮೇಲೆ ಯೆಹೋವ ದೇವರ ಆತ್ಮ ಬರಲು, ಇವನು ಮತ್ತನ್ಯನಿಗೆ ಹುಟ್ಟಿದ ಯೆಹೀಯೇಲನ ಮರಿಮಗ, ಬೆನಾಯನ ಮೊಮ್ಮಗ, ಹಾಗೂ ಜೆಕರ್ಯನ ಮಗ.