2 Chronicles 20:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲವು ಜನರು ಯೆಹೋಷಾಫಾಟನ ಬಳಿಗೆ ಬಂದು, “ಎದೋಮ್ಯರ ದೊಡ್ಡ ಸೈನ್ಯವು ಲವಣಸಮುದ್ರದ ಆಚೆಕಡೆಯಿಂದ ನಿನಗೆ ವಿರುದ್ಧವಾಗಿ ಬರುತ್ತಿದೆ. ಈಗಾಗಲೇ ಅವರು ಹಚೆಚೋನ್ ತಾಮಾರಿನಲ್ಲಿದ್ದಾರೆ” (ಇದನ್ನು ಏಂಗೆದಿ ಎಂತಲೂ ಕರೆಯುತ್ತಾರೆ.) ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೂತರು ಬಂದು ಯೆಹೋಷಾಫಾಟನಿಗೆ, “ಮಹಾಸಮೂಹವು ನಿನಗೆ ವಿರುದ್ಧವಾಗಿ ಲವಣ ಸಮುದ್ರದ ಆಚೆಯಲ್ಲಿರುವ ಅರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ ‘ಏಂಗೆದಿ’ ಎನಿಸಿಕೊಳ್ಳುವ ಹಚಚೋನ್ ತಾಮಾರಿನಲ್ಲಿ ಬಂದು ತಂಗಿದ್ದಾರೆ” ಎಂದು ತಿಳಿಸಿದರು.
Kannada BSI Bible 2016
ಆಗ ಕೆಲವರು ಬಂದು ಯೆಹೋಷಾಫಾಟನಿಗೆ--ಸಮು ದ್ರದ ಆಚೆಯಿಂದ ನಿನಗೆ ವಿರೋಧವಾಗಿ ಅರಾಮಿನ ಬಹುಗುಂಪು ಈ ಕಡೆ ಬರುತ್ತದೆ; ಇಗೋ, ಅವರು ಏಂಗೆದಿ ಎಂಬ ಹಚೆಚೋನ್‌ ತಾಮಾರಿನಲ್ಲಿ ಇದ್ದಾ ರೆಂದು ತಿಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೂತರು ಬಂದು ಯೆಹೋಷಾಫಾಟನಿಗೆ - ಮಹಾಸಮೂಹವು ನಿನಗೆ ವಿರೋಧವಾಗಿ ಲವಣಸಮುದ್ರದ ಆಚೆಯಲ್ಲಿರುವ ಅರಾಮ್ ಪ್ರಾಂತದ ಕಡೆಯಿಂದ ಬಂದು ಈಗ ಏಂಗೆದಿಯೆನಿಸಿಕೊಳ್ಳುವ ಹಚೆಚೋನ್‍ತಾಮಾರಿನಲ್ಲಿರುತ್ತಾರೆಂದು ತಿಳಿಸಿದಾಗ
Kannada Bible (KNCL) BSI 2016
ದೂತರು ಬಂದು ಯೆಹೋಷಾಫಾಟನಿಗೆ, “ಮಹಾಸೈನ್ಯ ಸಮೂಹವೊಂದು ನಿನಗೆ ವಿರೋಧವಾಗಿ ಲವಣಸಮುದ್ರದ ಆಚೆಯಲ್ಲಿರುವ ಆರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ ಏಂಗೆದಿಯೆನಿಸಿಕೊಳ್ಳುವ ಹಚೆಚೋನ್‍ತಾಮಾರಿನಲ್ಲಿ ಇರುತ್ತಾರೆ,” ಎಂದು ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕೆಲವರು ಬಂದು ಯೆಹೋಷಾಫಾಟನಿಗೆ, “ಅರಾಮಿನ ಈಚೆಯಲ್ಲಿರುವ ಲವಣ ಸಮುದ್ರದ ಆಚೆಯಿಂದ ನಿನಗೆ ವಿರೋಧವಾಗಿ ಮಹಾ ಸಮೂಹವೊಂದು ಬರುತ್ತದೆ. ಅವರು ಏನ್ಗೆದಿ ಎಂಬ ಹಜಜೋನ್ ತಾಮಾರಿನಲ್ಲಿ ಇದ್ದಾರೆ,” ಎಂದು ತಿಳಿಸಿದರು.