2 Chronicles 20:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಷಾಫಾಟನು ಜನರ ಸಲಹೆಗಳನ್ನು ಕೇಳಿದನು; ಯೆಹೋವನನ್ನು ಸ್ತುತಿಸಲು ಗಾಯಕರನ್ನು ಆರಿಸಿದನು; ಯಾಕೆಂದರೆ ಆತನು ಪರಿಶುದ್ಧನು ಮತ್ತು ಅದ್ಭುತಸ್ವರೂಪನು. ಅವರು ಸೈನ್ಯದ ಮುಂದುಗಡೆಯಲ್ಲಿ ಹೋಗುತ್ತಾ ಆತನಿಗೆ ಸ್ತುತಿಗೀತೆಯನ್ನು ಹಾಡಿದರು. ಆ ಗಾಯಕರು, ‘ಯೆಹೋವನಿಗೆ ಸ್ತೋತ್ರಮಾಡಿರಿ. ಆತನ ಕರುಣೆಯು ನಿರಂತರವಾದದ್ದು” ಎಂದು ಹಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು.
Kannada BSI Bible 2016
ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವನು ಜನರ ಸಮ್ಮತಿಯಿಂದ ಯೆಹೋವನಿಗೋಸ್ಕರ ಗಾಯನಮಾಡುವದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ - ಪರಿಶುದ್ಧತ್ವವೆಂಬ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ - ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಕೃಪೆಯು ಶಾಶ್ವತವಾಗಿದೆ ಎಂದು ಭಜಿಸಿರಿ ಎಂಬದಾಗಿ ಆಜ್ಞಾಪಿಸಿದನು.
Kannada Bible (KNCL) BSI 2016
ಆಮೇಲೆ ಜನರ ಸಮ್ಮತಿಯಿಂದ ಸರ್ವೇಶ್ವರನಿಗಾಗಿ ಗಾಯನಮಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡನು. ಅವರಿಗೆ, “ಪರಿಶುದ್ಧತ್ವವೆಂಬ ಭೂಷಣದೊಡನೆ ಯೋಧರ ಮುಂದೆ ಹೋಗುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಮಾಡಿರಿ, ಅವರ ಅಚಲಪ್ರೀತಿ ಶಾಶ್ವತ’ ಎಂದು ಭಜಿಸಿರಿ,” ಎಂಬುದಾಗಿ ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಯೆಹೋಷಾಫಾಟನು, ಪರಿಶುದ್ಧತ್ವದ ವೈಭವದಿಂದ ಯೆಹೋವ ದೇವರಿಗೆ ಹಾಡುವಂತೆ ಸಂಗೀತಗಾರರನ್ನು ನೇಮಿಸಿದನು. ಅವರು ಸೈನ್ಯದ ಮುಂದೆ ಹೋಗುತ್ತಾ, “ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂದು ಹಾಡುವಂತೆ ನೇಮಿಸಿದನು.