2 Chronicles 20:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಹೀಗೆ ಸ್ತೋತ್ರ ಮಾಡುತ್ತಿರುವಾಗ ಅಮ್ಮೋನಿಯರ ಮೇಲೆಯೂ ಮೋವಾಬ್ಯರ ಮೇಲೆಯೂ ಸೇಯೀರ್ ಬೆಟ್ಟಪ್ರದೇಶದವರ ಮೇಲೆಯೂ ಇತರ ವೈರಿಗಳು ಹಠಾತ್ತನೆ ದಾಳಿ ಮಾಡುವಂತೆ ಯೆಹೋವನು ಮಾಡಿದನು. ಯೆಹೂದವನ್ನು ಆಕ್ರಮಣಮಾಡಲು ಬಂದಿದ್ದ ಅವರೆಲ್ಲರೂ ಸೋತುಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಯೆಹೋವನು ಯೆಹೂದ್ಯರಿಗೆ ವಿರುದ್ಧವಾಗಿ ಬಂದ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ, ಸೇಯೀರ್ ಪರ್ವತದವರನ್ನೂ ನಾಶಮಾಡುವುದಕ್ಕಾಗಿ ಹೊಂಚು ಹಾಕುವವರನ್ನು ಬರಮಾಡಿದನು.
Kannada BSI Bible 2016
ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯಾರ್ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವದಕ್ಕೆ ಪ್ರಾರಂಭಿಸಲು ಯೆಹೋವನು ಯೆಹೂದ್ಯರಿಗೆ ವಿರೋಧವಾಗಿ ಬಂದ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್ ಪರ್ವತದವರನ್ನೂ ನಶಿಸುವದಕ್ಕೋಸ್ಕರ ಅವರಲ್ಲಿ ಹೊಂಚುಹಾಕುವವರನ್ನು ಇರಿಸಿದ್ದರಿಂದ ಅಮ್ಮೋನಿಯರೂ ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಪೂರ್ಣವಾಗಿ ಸಂಹರಿಸಿಬಿಟ್ಟರು;
Kannada Bible (KNCL) BSI 2016
ಅವರು ಉತ್ಸಾಹಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಸರ್ವೇಶ್ವರ ಯೆಹೂದ್ಯರಿಗೆ ವಿರುದ್ಧ ಬಂದ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್‍ಪರ್ವತದವರನ್ನೂ ನಶಿಸುವುದಕ್ಕಾಗಿ ಅವರಲ್ಲಿ ಹೊಂಚುಹಾಕುವವರನ್ನು ಇರಿಸಿದ್ದರು. ಅಮ್ಮೋನಿಯರೂ ಮೋವಾಬ್ಯರೂ ಸೇಯೀರ್‍ಪರ್ವತದವರ ಮೇಲೆ ಬಿದ್ದು ಅವರನ್ನು ಪೂರ್ಣವಾಗಿ ಸಂಹರಿಸಿಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹಾಡುವುದಕ್ಕೂ, ಸ್ತುತಿಸುವುದಕ್ಕೂ ಆರಂಭಿಸಿದಾಗಲೇ ಯೆಹೋವ ದೇವರು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯೀರ್ ಪರ್ವತಗಳ ಜನರನ್ನು ಸೋಲಿಸುವುದಕ್ಕೆ ಅವರಲ್ಲಿಯೇ ಹೊಂಚಿಕೊಳ್ಳುವವರನ್ನು ಇರಿಸಿದ್ದರು.