2 Chronicles 20:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಮ್ಮೋನಿಯರೂ ಮೋವಾಬ್ಯರೂ ಸೇಯೀರ್ ಬೆಟ್ಟಪ್ರದೇಶದವರೊಂದಿಗೆ ಹೋರಾಡಲಾರಂಭಿಸಿ ಅವರನ್ನು ಕೊಂದು ನಾಶಪಡಿಸಿದರು. ಅವರು ಸೇಯೀರ್ ಬೆಟ್ಟಪ್ರದೇಶದವರನ್ನು ಕೊಂದ ಬಳಿಕ ತಮ್ಮಲ್ಲಿ ತಾವೇ ಒಬ್ಬರನ್ನೊಬ್ಬರು ಕೊಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಮ್ಮೋನಿಯರೂ, ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಸಂಪೂರ್ಣವಾಗಿ ಸಂಹರಿಸಿಬಿಟ್ಟರು. ಅಮ್ಮೋನಿಯರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.
Kannada BSI Bible 2016
ಅಮ್ಮೋನ್, ಮೋವಾಬ್ಯರ ಮಕ್ಕಳು ಸೇಯಾರ್ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವದಕ್ಕೆ ಪ್ರಾರಂಭಿಸಿದರು.
Kannada Bible (KNCL) BSI 2016
ಅವರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಮ್ಮೋನಿಯರು, ಮೋವಾಬ್ಯರು ಸೇಯೀರ್ ಪರ್ವತದ ನಿವಾಸಿಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯೀರನ ನಿವಾಸಿಗಳನ್ನು ಪೂರ್ಣವಾಗಿ ವಧಿಸಿದ ತರುವಾಯ, ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.