2 Chronicles 20:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ಸೈನ್ಯದವರು ಅರಣ್ಯದಲ್ಲಿ ಶತ್ರು ಸೈನ್ಯವನ್ನು ವೀಕ್ಷಿಸುವ ಸ್ಥಳಕ್ಕೆ ಬಂದಾಗ ಸೈನ್ಯವನ್ನು ಕಾಣದೆ ರಾಶಿಯಾಗಿ ಬಿದ್ದಿದ್ದ ಹೆಣಗಳನ್ನೇ ಕಂಡರು; ಯಾರೂ ಜೀವದಿಂದುಳಿದಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರು ಅರಣ್ಯದಲ್ಲಿನ ಬುರುಜಿಗೆ ಬಂದು ಆ ಸಮೂಹವಿದ್ದ ಕಡೆಗೆ ನೋಡಿದಾಗ, ನೆಲದ ಮೇಲೆ ಬಿದ್ದಿರುವ ಹೆಣಗಳ ಹೊರತಾಗಿ, ಜೀವದಿಂದುಳಿದವರು ಯಾರು ಕಾಣಿಸಲಿಲ್ಲ.
Kannada BSI Bible 2016
ಯೆಹೂದದವರು ಅರಣ್ಯದಲ್ಲಿ ರುವ ಬುರುಜಿನ ಸ್ಥಳಕ್ಕೆ ಬಂದಾಗ ಅವರು ಗುಂಪನ್ನು ದೃಷ್ಟಿಸಿದರು; ಇಗೋ, ಅವರಲ್ಲಿ ಒಬ್ಬನೂ ತಪ್ಪದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರು ಅರಣ್ಯದಲ್ಲಿನ ಬುರುಜಿಗೆ ಬಂದು ಆ ಸಮೂಹವಿದ್ದ ಕಡೆಗೆ ನೋಡಿದಾಗ ನೆಲದ ಮೇಲೆ ಬಿದ್ದಿರುವ ಹೆಣಗಳು ಹೊರತಾಗಿ ಜೀವದಿಂದುಳಿದವರು ಯಾರೂ ಕಾಣಿಸಲಿಲ್ಲ.
Kannada Bible (KNCL) BSI 2016
ಯೆಹೂದ್ಯರು ಮರುಭೂಮಿಯ ಬುರುಜಿಗೆ ಬಂದು ಆ ಸೈನ್ಯಸಮೂಹವಿದ್ದ ಕಡೆಗೆ ನೋಡಿದಾಗ ನೆಲದ ಮೇಲೆ ಬಿದ್ದಿರುವ ಹೆಣಗಳು ಹೊರತಾಗಿ ಜೀವದಿಂದುಳಿದವರು ಯಾರೂ ಕಾಣಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದವರು ಮರುಭೂಮಿಯಲ್ಲಿರುವ ಎತ್ತರದ ಸ್ಥಳಕ್ಕೆ ಬಂದು, ಅಲ್ಲಿನ ಗುಂಪನ್ನು ನೋಡಿದಾಗ, ಅವರಲ್ಲಿ ಒಬ್ಬನೂ ಉಳಿಯದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು.