2 Chronicles 20:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾಲ್ಕನೆಯ ದಿವಸದಲ್ಲಿ ಯೆಹೋಷಾಫಾಟನೂ ಅವನ ಸೈನ್ಯವೂ ಬೆರಾಕ ತಗ್ಗಿನಲ್ಲಿ ಬಂದು ಸೇರಿದರು. ಅಲ್ಲಿ ಯೆಹೋವನಿಗೆ ಸ್ತೋತ್ರ ಮಾಡಿದರು. ಆದ್ದರಿಂದ ಈ ದಿನದವರೆಗೂ ಅದಕ್ಕೆ ಬೆರಾಕ ತಗ್ಗು ಎಂಬ ಹೆಸರಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾಲ್ಕನೆಯ ದಿನದಲ್ಲಿ ಬೆರಾಕ ತಗ್ಗಿನಲ್ಲಿ ಕೂಡಿಬಂದರು. ಅವರು ಅಲ್ಲಿ ಯೆಹೋವನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನ ವರೆಗೂ ಬೆರಾಕ ತಗ್ಗು ಎಂಬ ಹೆಸರಿದೆ.
Kannada BSI Bible 2016
ನಾಲ್ಕನೇ ದಿವಸ ದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡು ಅಲ್ಲಿ ಕರ್ತನನ್ನು ಸ್ತುತಿಸಿದರು. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಲ್ಕನೆಯ ದಿನದಲ್ಲಿ ಬೆರಾಕ ತಗ್ಗಿನಲ್ಲಿ ಕೂಡಿಬಂದರು. ಅವರು ಅಲ್ಲಿ ಯೆಹೋವನನ್ನು ಸ್ತುತಿಸಿದದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಬೆರಾಕ ತಗ್ಗು ಎಂಬ ಹೆಸರಿದೆ.
Kannada Bible (KNCL) BSI 2016
ನಾಲ್ಕನೆಯ ದಿನದಲ್ಲಿ ಬೆರಾಕ ಕಣಿವೆಗೆ ಕೂಡಿಬಂದರು. ಅಲ್ಲಿ ಅವರು ಸರ್ವೇಶ್ವರನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ‘ಬೆರಾಕ ಕಣಿವೆ’ ಎಂಬ ಹೆಸರಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾಲ್ಕನೆಯ ದಿವಸದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡರು. ಅಲ್ಲಿ ಯೆಹೋವ ದೇವರನ್ನು ಸ್ತುತಿಸಿದರು. ಆದಕಾರಣ ಇಂದಿನವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.