2 Chronicles 20:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ ದೇಶವನ್ನು ಯೆಹೋಷಾಫಾಟನು ಆಳಿದನು. ಅವನು ಪಟ್ಟವನ್ನೇರಿದಾಗ ಮೂವತ್ತೈದು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಅವನ ತಾಯಿಯ ಹೆಸರು ಅಜೂಬ. ಆಕೆ ಶಿಲ್ಹಿ ಎಂಬಾತನ ಮಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರ ಅರಸನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದಾಗ ಮೂವತ್ತೈದು ವರ್ಷದವನಾಗಿದ್ದನು. ಇವನು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಡಳಿತ ನಡೆಸಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ.
Kannada BSI Bible 2016
ಹೀಗೆ ಯೆಹೋಷಾಫಾಟನು ಯೆಹೂದದ ಮೇಲೆ ಆಳಿದನು. ಅವನು ಆಳಲು ಆರಂಭಿಸಿದಾಗ ಮೂವತ್ತೈದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಆಕೆಯು ಶಿಲ್ಹಿಯ ಮಗಳಾ ಗಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರ ಅರಸನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದಾಗ ಮೂವತ್ತೈದು ವರುಷದವನಾಗಿದ್ದನು; ಇವನು ಯೆರೂಸಲೇವಿುನಲ್ಲಿ ಇಪ್ಪತ್ತೈದು ವರುಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಇವನ ತಾಯಿ.
Kannada Bible (KNCL) BSI 2016
ಯೆಹೂದ್ಯರ ಅರಸ ಯೆಹೋಷಾಫಾಟನು ಪಟ್ಟಕ್ಕೆ ಬಂದಾಗ ಮೂವತ್ತೈದು ವರ್ಷದವನಾಗಿದ್ದನು. ಇವನು ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆ ಇವನ ತಾಯಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಷಾಫಾಟನು ಯೆಹೂದ್ಯರ ಮೇಲೆ ಆಳಿದನು. ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ.