2 Chronicles 20:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲಕಾಲದ ನಂತರ ಯೆಹೋಷಾಫಾಟನು ಇಸ್ರೇಲರ ರಾಜನಾಗಿದ್ದ ಅಹಜ್ಯನೊಂದಿಗೆ ಒಪ್ಪಂದವನ್ನು ಮಾಡಿಕೊಂಡನು. ಅಹಜ್ಯನು ದೇವರ ದೃಷ್ಟಿಯಲ್ಲಿ ಬಹು ದುಷ್ಟನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನೂ, ಬಹು ದುರಾಚಾರಿಯೂ ಆದ ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡನು.
Kannada BSI Bible 2016
ಇದರ ತರುವಾಯ ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನೂ ಬಹು ದುಷ್ಟನಾಗಿ ನಡೆದವನೂ ಆದ ಅಹಜ್ಯನ ಸಂಗಡ ಸಹವಾಸಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನೂ ಬಹುದುರಾಚಾರಿಯೂ ಆದ ಅಹಜ್ಯನೊಡನೆ ಒಡಂಬಡಿಕೆಮಾಡಿಕೊಂಡನು.
Kannada Bible (KNCL) BSI 2016
ಒಮ್ಮೆ ಯೆಹೂದ್ಯರ ಅರಸ ಯೆಹೋಷಾಫಾಟನು, ಬಹು ದುರಾಚಾರಿಯಾದ ಇಸ್ರಯೇಲರ ಅರಸ ಅಹಜ್ಯನೊಡನೆ ಒಂದು ಒಪ್ಪಂದ ಮಾಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರ ತರುವಾಯ ಯೆಹೂದದ ಅರಸನಾದ ಯೆಹೋಷಾಫಾಟನು, ಬಹು ದುಷ್ಟನಾಗಿ ನಡೆದ ಇಸ್ರಾಯೇಲಿನ ಅರಸನಾದ ಅಹಜ್ಯನ ಸಂಗಡ ಒಪ್ಪಂದ ಮಾಡಿಕೊಂಡನು.