2 Chronicles 20:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಎಲಿಯೇಜರನು ಯೆಹೋಷಾಫಾಟನ ವಿರುದ್ಧವಾಗಿ ಪ್ರವಾದಿಸಿದನು. ಅವನು ದೋದಾವಾಹುವಿನ ಮಗನು. ಅವನು ಮಾರೇಶ ಎಂಬ ಪಟ್ಟಣದವನಾಗಿದ್ದನು. ಅವನು, “ಯೆಹೋಷಾಫಾಟನೇ, ನೀನು ಅಹಜ್ಯನೊಂದಿಗೆ ಸೇರಿಕೊಂಡಿರುವೆ. ಇದಕ್ಕಾಗಿ ಯೆಹೋವನು ನಿನ್ನ ಕೆಲಸಗಳನ್ನು ನಾಶಮಾಡುವನು” ಎಂದು ಹೇಳಿದನು. ಅವನ ಹಡಗುಗಳು ಸಮುದ್ರದಲ್ಲಿ ಒಡೆದು ಹೋದದ್ದರಿಂದ ಅವುಗಳು ತಾರ್ಷೀಷಿಗೆ ಹೋಗಲಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮಾರೇಷಾ ಊರಿನ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರುದ್ಧವಾಗಿ, “ನೀನು ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡದ್ದರಿಂದ ಯೆಹೋವನು ನಿನ್ನ ಕೆಲಸವನ್ನು ಹಾಳು ಮಾಡುವನು” ಎಂದು ಪ್ರವಾದಿಸಿದನು. ಆ ಹಡುಗುಗಳು ಒಡೆದು ಹೋದುದರಿಂದ ತಾರ್ಷೀಷಿಗೆ ಪ್ರಯಾಣ ಮಾಡಲು ಸಾಧ್ಯವಾಗಲಿಲ್ಲ.
Kannada BSI Bible 2016
ಆಗ ಮಾರೇ ಷಾದವನಾಗಿರುವ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧ ವಾಗಿ ಪ್ರವಾದಿಸಿ--ನೀನು ಅಹಜ್ಯನ ಸಂಗಡ ಸೇರಿ ಕೊಂಡಿದ್ದರಿಂದ ಕರ್ತನು ನಿನ್ನ ಕ್ರಿಯೆಗಳನ್ನು ಹಾಳು ಮಾಡಿಬಿಟ್ಟನೆಂದು ಹೇಳಿದನು. ಹಡಗುಗಳು ತಾರ್ಷಿ ಷಿಗೆ ಹೋಗ ಕೂಡದ ಹಾಗೆ ಒಡೆಯಲ್ಪಟ್ಟವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮಾರೇಷಾ ಊರಿನ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧವಾಗಿ - ನೀನು ಅಹಜ್ಯನೊಡನೆ ಒಡಂಬಡಿಕೆ ಮಾಡಿಕೊಂಡದ್ದರಿಂದ ಯೆಹೋವನು ನಿನ್ನ ಕೆಲಸವನ್ನು ಹಾಳುಮಾಡುವನು ಎಂದು ಪ್ರವಾದಿಸಿದನು. ಆ ಹಡಗುಗಳು ಒಡೆದುಹೋದದ್ದರಿಂದ ತಾರ್ಷೀಷಿಗೆ ಹೊರಡಲೇ ಇಲ್ಲ.
Kannada Bible (KNCL) BSI 2016
ಆಗ ಮಾರೇಷಾ ಊರಿನ ದೋದಾವಾಹುವಿನ ಮಗ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧವಾಗಿ, “ನೀನು ಅಹಜ್ಯನೊಡನೆ ಒಪ್ಪಂದಮಾಡಿಕೊಂಡಿದ್ದರಿಂದ ಸರ್ವೇಶ್ವರ ನಿನ್ನ ಕೆಲಸವನ್ನು ಹಾಳುಮಾಡುವರು,” ಎಂದು ಪ್ರವಾದಿಸಿದನು. ಆ ಹಡಗುಗಳು ಒಡೆದುಹೋದುದರಿಂದ ತಾರ್ಷೀಷಿಗೆ ಹೊರಡಲೇ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮಾರೇಷಾ ಊರಿನ ದೋದವಾಹುವಿನ ಮಗನಾದ ಎಲೀಯೆಜೆರನು ಯೆಹೋಷಾಫಾಟನಿಗೆ ವಿರೋಧವಾಗಿ ಪ್ರವಾದಿಸಿ, “ನೀನು ಅಹಜ್ಯನ ಸಂಗಡ ಒಪ್ಪಂದ ಮಾಡಿಕೊಂಡಿದ್ದರಿಂದ, ಯೆಹೋವ ದೇವರು ನೀನು ಮಾಡಿದವುಗಳನ್ನು ನಾಶಮಾಡುವರು,” ಎಂದು ಹೇಳಿದನು. ಅದರಂತೆಯೇ, ಆ ಹಡಗುಗಳು ತಾರ್ಷೀಷಿಗೆ ಹೋಗದೆ ಒಡೆದುಹೋದವು.