2 Chronicles 20:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಮ್ಮ ಪಿತೃಗಳ ದೇವರಾದ ಯೆಹೋವನೇ, ನೀನು ಪರಲೋಕದಲ್ಲಿರುವ ದೇವರು. ಲೋಕದ ಎಲ್ಲಾ ದೇಶಗಳನ್ನಾಳುವವನು ನೀನೇ. ಬಲಸಾಮರ್ಥ್ಯವುಳ್ಳವನು ನೀನೇ, ಯಾರೂ ನಿನಗೆದುರಾಗಿ ನಿಲ್ಲಲಾರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನೇ, ನಮ್ಮ ಪೂರ್ವಿಕರ ದೇವರೇ, ಪರಲೋಕದಲ್ಲಿ ದೇವರಾಗಿ ಇರುವಾತನು ನೀನಲ್ಲವೋ? ನೀನು ಜನಾಂಗಗಳನ್ನೂ, ಎಲ್ಲಾ ರಾಜ್ಯಗಳನ್ನು ಆಳುವವನಾಗಿರುವೆ. ಬಲ, ಪರಾಕ್ರಮಗಳು ನಿನ್ನ ಕೈಗಳಲ್ಲಿ ಇರುತ್ತವೆ: ನಿನ್ನೆದುರಿನಲ್ಲಿ ನಿಲ್ಲುವವರು ಯಾರಿದ್ದಾರೆ?
Kannada BSI Bible 2016
ಓ ಕರ್ತನೇ, ಪರಲೋಕದಲ್ಲಿರುವ ದೇವರು ನೀನಲ್ಲವೋ? ನೀನು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀಯಲ್ಲವೋ? ಯಾವನೂ ನಿನ್ನನ್ನು ಎದುರಿಸಕೂಡದ ಹಾಗೆ ನಿನ್ನ ಕೈಯಲ್ಲಿ ಶಕ್ತಿಯೂ ಪರಾಕ್ರಮವೂ ಇಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನಮ್ಮ ಪಿತೃಗಳ ದೇವರೇ, ಪರಲೋಕದಲ್ಲಿ ದೇವರಾಗಿರುವಾತನು ನೀನಲ್ಲವೋ? ನೀನು ಜನಾಂಗಗಳ ಎಲ್ಲಾ ರಾಜ್ಯಗಳನ್ನು ಆಳುವವನಾಗಿರುತ್ತೀ. ನಿನ್ನ ಹಸ್ತದಲ್ಲಿ ಬಲಪರಾಕ್ರಮಗಳಿರುತ್ತವೆ; ನಿನ್ನೆದುರಿನಲ್ಲಿ ಯಾರೂ ನಿಲ್ಲಲಾರರು.
Kannada Bible (KNCL) BSI 2016
“ಸರ್ವೇಶ್ವರಾ, ನಮ್ಮ ಪಿತೃಗಳ ದೇವರೇ, ಪರಲೋಕದಲ್ಲಿ ದೇವರಾಗಿ ಇರುವವರು ನೀವಲ್ಲವೇ? ನೀವು ಜನಾಂಗಗಳ ಎಲ್ಲ ರಾಜ್ಯಗಳನ್ನೂ ಆಳುತ್ತಿದ್ದೀರಿ. ನಿಮ್ಮ ಹಸ್ತದಲ್ಲಿ ಬಲಪರಾಕ್ರಮಗಳಿವೆ; ನಿಮ್ಮೆದುರಿನಲ್ಲಿ ಯಾರೂ ನಿಲ್ಲಲಾರರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಮ್ಮ ಪಿತೃಗಳ ದೇವರಾದ ಯೆಹೋವ ದೇವರೇ, ಪರಲೋಕದಲ್ಲಿರುವ ದೇವರು ನೀವಲ್ಲವೋ? ನೀವು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀರಲ್ಲವೋ? ಯಾವನೂ ನಿಮ್ಮನ್ನು ಎದುರಿಸಲಾಗದ ಹಾಗೆ ನಿಮ್ಮ ಕೈಯಲ್ಲಿ ಶಕ್ತಿಯೂ, ಪರಾಕ್ರಮವೂ ಇಲ್ಲವೋ?