2 Chronicles 20:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನೇ ನಮ್ಮ ದೇವರಾಗಿರುವೆ. ನೀನು ಈ ದೇಶದಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿ ಈ ದೇಶವನ್ನು ಅಬ್ರಹಾಮನ ಸಂತತಿಯವರಾದ ಇಸ್ರೇಲರಿಗೆ ಕೊಟ್ಟೆ. ಅಬ್ರಹಾಮನು ನಿನ್ನ ಸ್ನೇಹಿತನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ?.
Kannada BSI Bible 2016
ನೀನು ನಿನ್ನ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗ ಳನ್ನು ಓಡಿಸಿಬಿಟ್ಟು ಅದನ್ನು ನಿನ್ನ ಸ್ನೇಹಿತನಾದ ಅಬ್ರ ಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀನು ನಮ್ಮ ದೇವರಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಹೊರಡಿಸಿ ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಟ್ಟಿಯಲ್ಲಾ.
Kannada Bible (KNCL) BSI 2016
ನಮ್ಮ ದೇವರಾದ ನೀವು ನಿಮ್ಮ ಪ್ರಜೆಗಳಾದ ಇಸ್ರಯೇಲರ ಎದುರಿನಿಂದ ಈ ನಾಡಿನ ನಿವಾಸಿಗಳನ್ನು ಹೊರದೂಡಿಸಿ, ಇದನ್ನು ಮಿತ್ರ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸೊತ್ತಾಗಿ ಕೊಟ್ಟಿರಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನಿಮ್ಮ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿಬಿಟ್ಟು, ಅದನ್ನು ನಿಮ್ಮ ಸ್ನೇಹಿತನಾದ ಅಬ್ರಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀವು, ನಮ್ಮ ದೇವರಲ್ಲವೋ?