2 Chronicles 21:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಷಾಫಾಟನು ಸತ್ತನು. ಅವನನ್ನು ಅವನ ಪೂರ್ವಿಕರೊಂದಿಗೆ ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ಮಗನಾದ ಯೆಹೋರಾಮನು ಪಟ್ಟಕ್ಕೆ ಬಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಷಾಫಾಟನು ಪೂರ್ವಿಕರ ಬಳಿಗೆ ಸೇರಿದನು. ದಾವೀದನಗರದಲ್ಲಿ ಅವನನ್ನು ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದ ಮೇಲೆ, ಅವನ ಮಗನಾದ ಯೆಹೋರಾಮನು ಅರಸನಾದನು.
Kannada BSI Bible 2016
ಆದರೆ ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ದಾವೀದನ ಪಟ್ಟಣ ದಲ್ಲಿ ತನ್ನ ಪಿತೃಗಳ ಸಂಗಡ ಹೂಣಲ್ಪಟ್ಟನು. ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಷಾಫಾಟನು ಪಿತೃಗಳ ಬಳಿಗೆ ಸೇರಿ ದಾವೀದನಗರದಲ್ಲಿ ಪೂರ್ವಿಕರ ಶ್ಮಶಾನಭೂವಿುಯಲ್ಲಿ ಸಮಾಧಿಹೊಂದಿದ ಮೇಲೆ ಅವನಿಗೆ ಬದಲಾಗಿ ಅವನ ಮಗನಾದ ಯೆಹೋರಾಮನು ಅರಸನಾದನು.
Kannada Bible (KNCL) BSI 2016
ಯೆಹೋಷಾಫಾಟನು ಮೃತನಾಗಿ ಪಿತೃಗಳ ಬಳಿಗೆ ಸೇರಿ ದಾವೀದನಗರದಲ್ಲಿದ್ದ ಪೂರ್ವಿಕರ ಸ್ಮಶಾನಭೂಮಿಯಲ್ಲಿ ಸಮಾಧಿಹೊಂದಿದ ಮೇಲೆ, ಅವನ ಸ್ಥಾನದಲ್ಲಿ ಅವನ ಮಗ ಯೆಹೋರಾಮನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಷಾಫಾಟನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಪೂರ್ವಜರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಆಗ ಅವನಿಗೆ ಬದಲಾಗಿ ಅವನ ಮಗನಾದ ಯೆಹೋರಾಮನು ಅರಸನಾದನು.