2 Chronicles 21:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರವಾದಿಯಾದ ಎಲೀಯನು ಯೆಹೋರಾಮನಿಗೆ ಈ ಸಂದೇಶವನ್ನು ಕಳುಹಿಸಿದನು: “ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನ ಮಾತಿದು. ಆತನು ಹೇಳುವುದೇನೆಂದರೆ, ‘ಯೆಹೋರಾಮನೇ, ನೀನು ನಿನ್ನ ತಂದೆಯಾದ ಯೆಹೋಷಾಫಾಟನು ಜೀವಿಸಿದ್ದ ರೀತಿಯಲ್ಲಿ ಜೀವಿಸುತ್ತಿಲ್ಲ. ಯೆಹೂದದೇಶದ ಅರಸನಾದ ಆಸನು ಜೀವಿಸಿದ್ದ ರೀತಿಯಲ್ಲಿಯೂ ನೀನು ಜೀವಿಸುತ್ತಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ, ಪ್ರವಾದಿಯಾದ ಎಲೀಯನು ಕಾಗದದ ಮೂಲಕವಾಗಿ ಅವನಿಗೆ, “ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನ ಮಾತನ್ನು ಕೇಳು; ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸನಾದ ಆಸನ ಮಾರ್ಗದಲ್ಲಿ ನಡೆಯಲಿಲ್ಲ;
Kannada BSI Bible 2016
ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಬರಹವು ಬಂತು. ಏನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗ ಗಳಲ್ಲಿಯೂ ಯೆಹೂದದ ಅರಸನಾದ ಆಸನ ಮಾರ್ಗ ಗಳಲ್ಲಿಯೂ ನಡೆಯದೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಪ್ರವಾದಿಯಾದ ಎಲೀಯನು ಕಾಗದದ ಮೂಲಕವಾಗಿ ಅವನಿಗೆ - ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನ ಮಾತನ್ನು ಕೇಳು. ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗದಲ್ಲಿಯೂ ಯೆಹೂದ್ಯರ ಅರಸನಾದ ಆಸನ ಮಾರ್ಗದಲ್ಲಿಯೂ ನಡೆಯಲಿಲ್ಲ;
Kannada Bible (KNCL) BSI 2016
ಹೀಗಿರಲು, ಪ್ರವಾದಿ ಎಲೀಯನು ಪತ್ರದ ಮೂಲಕ ಅವನಿಗೆ, “ನಿನ್ನ ಪೂರ್ವಜ ದಾವೀದನ ದೇವರಾಗಿರುವ ಸರ್ವೇಶ್ವರನ ಮಾತನ್ನು ಕೇಳು: ನೀನು ನಿನ್ನ ತಂದೆ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸ ಆಸನ ಮಾರ್ಗದಲ್ಲಿ ನಡೆಯಲಿಲ್ಲ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಪತ್ರವು ಬಂತು. ಅದರಲ್ಲಿ ಅವನು, “ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗಗಳಲ್ಲಿಯೂ, ಯೆಹೂದದ ಅರಸನಾದ ಆಸನ ಮಾರ್ಗಗಳಲ್ಲಿಯೂ ನಡೆಯದೆ,