2 Chronicles 21:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯೆಹೋವನು ನಿನ್ನ ಜನರನ್ನು ಭಯಂಕರವಾದ ರೋಗದಿಂದ ದಂಡಿಸುವನು. ಆತನು ನಿನ್ನನ್ನೂ ನಿನ್ನ ಹೆಂಡತಿಮಕ್ಕಳನ್ನೂ ಆಸ್ತಿಪಾಸ್ತಿಯನ್ನೂ ಶಿಕ್ಷಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಯೆಹೋವನು ನಿನ್ನ ಪ್ರಜೆಗಳ, ಹೆಂಡತಿ ಮಕ್ಕಳನ್ನೂ, ಆಸ್ತಿಪಾಸ್ತಿ ಸರ್ವಸ್ವವನ್ನೂ ಮಹಾ ಆಪತ್ತಿಗೆ ಗುರಿಮಾಡುವನು.
Kannada BSI Bible 2016
ಇಗೋ, ಕರ್ತನು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ ಮಕ್ಕಳನ್ನೂ ಹೆಂಡತಿಯರನ್ನೂ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಯೆಹೋವನು ನಿನ್ನ ಪ್ರಜೆಯನ್ನೂ ಹೆಂಡರುಮಕ್ಕಳನ್ನೂ ಸರ್ವಸ್ವವನ್ನೂ ಮಹಾಪತ್ತಿಗೆ ಗುರಿಮಾಡುವನು.
Kannada Bible (KNCL) BSI 2016
ಆದುದರಿಂದ ಸರ್ವೇಶ್ವರ ನಿನ್ನ ಪ್ರಜೆಯನ್ನೂ ಮಡದಿಮಕ್ಕಳನ್ನೂ ಸರ್ವಸ್ವವನ್ನೂ ಮಹಾ ಆಪತ್ತಿಗೆ ಗುರಿಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ, ನಿನ್ನ ಮಕ್ಕಳನ್ನೂ, ನಿನ್ನ ಹೆಂಡತಿಯರನ್ನೂ, ನಿನ್ನ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾರೆ.