2 Chronicles 21:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎರಡು ವರ್ಷಗಳ ನಂತರ ಆ ರೋಗದ ನಿಮಿತ್ತ ಅವನ ಕರುಳುಗಳು ಹೊರಬಿದ್ದವು. ಅವನು ಬಹಳ ನೋವನ್ನು ಅನುಭವಿಸಿ ಸತ್ತನು. ಅವನು ಸತ್ತಾಗ ಅವನ ತಂದೆಗೆ ಧೂಪಹಾಕಿ ಗೌರವಿಸಿದಂತೆ ಯೆಹೋರಾಮನಿಗೆ ಮಾಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಮೇಣವಾಗಿ ಅಂದರೆ, ಸುಮಾರು ಎರಡು ವರ್ಷಗಳಾದ ಮೇಲೆ, ಆದೇ ರೋಗದ ನಿಮಿತ್ತ ಅವನ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪ್ರಜೆಗಳು ಅವನ ಪೂರ್ವಿಕರಿಗಾಗಿ ಧೂಪಹಾಕಿದ ಹಾಗೆ ಅವನಿಗೆ ಹಾಕಲಿಲ್ಲ.
Kannada BSI Bible 2016
ಎರಡು ವರುಷವಾದ ತರುವಾಯ ಏನಾಯಿತಂದರೆ, ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆಯೇ ಅವನು ಕೆಟ್ಟ ರೋಗಗಳಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೋಸ್ಕರ ಸುಟ್ಟ ಹಾಗೆ ಅವನಿಗೋಸ್ಕರ ಸುಡಲಿಲ್ಲ.ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾಲಾಂತರದಲ್ಲಿ ಅಂದರೆ ಸುಮಾರು ಎರಡು ವರುಷಗಳಾದ ಮೇಲೆ ಆ ರೋಗದಿಂದ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪ್ರಜೆಗಳು ಅವನ ಪೂರ್ವಿಕರಿಗೋಸ್ಕರ ಧೂಪಹಾಕಿದ ಪ್ರಕಾರ ಅವನಿಗೆ ಹಾಕಲಿಲ್ಲ.
Kannada Bible (KNCL) BSI 2016
ಕಾಲಾಂತರದಲ್ಲಿ ಅಂದರೆ, ಸುಮಾರು ಎರಡು ವರ್ಷಗಳಾದ ಮೇಲೆ, ಅದೇ ರೋಗದ ನಿಮಿತ್ತ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪೂರ್ವಿಕರಿಗೆ ಧೂಪಹಾಕಿದಂತೆ ಅವನ ಪ್ರಜೆಗಳು ಅವನಿಗೆ ಹಾಕಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡು ವರ್ಷವಾದ ತರುವಾಯ, ಅವನ ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆ ಅವನು ಕಡುಬೇನೆಯಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೆ ಗೌರವಕ್ಕೋಸ್ಕರ ಅಗ್ನಿಕುಂಡ ಹಚ್ಚಲಿಲ್ಲ.