2 Chronicles 21:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು ತನ್ನನ್ನು ಬಲಪಡಿಸಿಕೊಂಡನು. ನಂತರ ತನ್ನ ತಮ್ಮಂದಿರನ್ನೆಲ್ಲಾ ಖಡ್ಗದಿಂದ ಹತಿಸಿದನು. ಮಾತ್ರವಲ್ಲದೆ ಇಸ್ರೇಲಿನ ಕೆಲವು ಪ್ರಧಾನರನ್ನು ಕೊಲ್ಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು ತನ್ನ ಆಳ್ವಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ, ತನ್ನ ಎಲ್ಲಾ ಸಹೋದರರನ್ನೂ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನೂ ಕತ್ತಿಯಿಂದ ಸಂಹರಿಸಿದನು.
Kannada BSI Bible 2016
ಯೆಹೋ ರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ ಇಸ್ರಾಯೇಲಿನ ಪ್ರಧಾನರಲ್ಲಿ ಕೆಲ ವರನ್ನೂ ಕತ್ತಿಯಿಂದ ಕೊಂದುಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡಕೊಂಡು ತನ್ನ ಆಳಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ ತನ್ನ ಎಲ್ಲಾ ಸಹೋದರರನ್ನೂ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನೂ ಕತ್ತಿಯಿಂದ ಸಂಹರಿಸಿದನು.
Kannada Bible (KNCL) BSI 2016
ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು, ತನ್ನ ಆಳ್ವಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ, ತನ್ನ ಎಲ್ಲ ಸಹೋದರರನ್ನೂ ಕೆಲವು ಮಂದಿ ಇಸ್ರಯೇಲ್ ಪ್ರಮುಖರನ್ನೂ ಕತ್ತಿಯಿಂದ ಸಂಹರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ, ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ, ಇಸ್ರಾಯೇಲಿನ ಪ್ರಧಾನರಲ್ಲಿ ಕೆಲವರನ್ನೂ ಖಡ್ಗದಿಂದ ಕೊಂದುಹಾಕಿದನು.