2 Chronicles 21:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಇಸ್ರೇಲಿನ ರಾಜರುಗಳು ವರ್ತಿಸಿದ ರೀತಿಯಲ್ಲಿ ಜೀವಿಸಿದನು. ಅಹಾಬನ ಕುಟುಂಬದವರು ಹೇಗೆ ಜೀವಿಸಿದರೋ ಹಾಗೆಯೇ ಜೀವಿಸಿದನು. ಯಾಕೆಂದರೆ ಅವನು ಅಹಾಬನ ಮಗಳನ್ನು ಮದುವೆಯಾಗಿದ್ದನು. ಯೆಹೋರಾಮನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿ ಜೀವಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ, ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
Kannada BSI Bible 2016
ಅಹಾಬನ ಮನೆಯವರು ನಡೆದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಅಹಾಬನ ಮಗಳು ಅವನಿಗೆ ಹೆಂಡತಿ ಯಾಗಿದ್ದಳು. ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು,
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಯೆರೂಸಲೇವಿುನಲ್ಲಿ ಎಂಟು ವರುಷ ಆಳಿದನು. ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್‍ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
Kannada Bible (KNCL) BSI 2016
ಅಹಾಬನ ಮಗಳನ್ನು ಇವನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದರಿಂದ ಅವನು ಅಹಾಬನ ಮನೆಯವರು ನಡೆದ ಹಾಗೆ ಇಸ್ರಾಯೇಲರ ಅರಸರ ಮಾರ್ಗವನ್ನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.