2 Chronicles 21:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೆಹೋವನು ದಾವೀದನೊಂದಿಗೆ ಮಾಡಿದ ಒಡಂಬಡಿಕೆಯ ನಿಮಿತ್ತ ಅವನನ್ನು ನಾಶಮಾಡಲಿಲ್ಲ. ಯೆಹೋವನು, “ದಾವೀದನ ಸಂತತಿಯವರ ಬೆಳಕು ಉರಿಯುತ್ತಲೇ ಇರುವದು” ಎಂದು ವಾಗ್ದಾನ ಮಾಡಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಯೆಹೋವನು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ” ಎಂದು ಒಡಂಬಡಿಕೆ ಮಾಡಿ ಹೇಳಿದ್ದರಿಂದ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.
Kannada BSI Bible 2016
ಆದರೆ ಕರ್ತನು ದಾವೀದನ ಸಂಗಡ ಮಾಡಿದ ಒಡಂಬಡಿಕೆಗೋಸ್ಕರವೂ ಆತನು ಅವನಿಗೂ ಅವನ ಮಕ್ಕಳಿಗೂ ಸರ್ವಕಾಲಕ್ಕೂ ಬೆಳಕನ್ನು ಕೊಡು ವೆನೆಂದು ಹೇಳಿದ್ದರಿಂದಲೂ ಆತನು ದಾವೀದನ ಮನೆಯನ್ನು ನಾಶಮಾಡಲು ಮನಸ್ಸಿಲ್ಲದೆ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಯೆಹೋವನು ದಾವೀದನಿಗೆ - ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವದಿಲ್ಲ ಎಂದು ಪ್ರಮಾಣಮಾಡಿ ಹೇಳಿದ್ದದರಿಂದ ದಾವೀದನ ಮನೆತನದವರನ್ನು ನಾಶಮಾಡುವದಕ್ಕೆ ಇಷ್ಟಪಡಲಿಲ್ಲ.
Kannada Bible (KNCL) BSI 2016
ಆದರೂ ಸರ್ವೇಶ್ವರ ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿ ಹೇಳಿದ್ದರಿಂದ ಆ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋವ ದೇವರು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿದ ಕಾರಣ, ದೇವರು ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.