2 Chronicles 21:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದನ್ನರಿತ ಯೆಹೋರಾಮನು ತನ್ನ ರಥಬಲದೊಡನೆ ಎದೋಮಿಗೆ ಹೋದನು. ಅಲ್ಲಿ ಎದೋಮ್ಯರ ಸೈನ್ಯ ಇವರಿಗೆ ಮುತ್ತಿಗೆ ಹಾಕಿತು. ಆದರೆ ರಾತ್ರಿ ಸಮಯದಲ್ಲಿಯೇ ಯೆಹೋರಾಮನು ಅವರನ್ನು ಸೋಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋರಾಮನು ರಾತ್ರಿಯಲ್ಲಿ ತನ್ನ ಸರದಾರರನ್ನೂ ಎಲ್ಲಾ ರಥಬಲವನ್ನೂ ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿದನು.ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲೇ ದಂಡೆತ್ತಿ ಹೋಗಿ ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು.
Kannada BSI Bible 2016
ಆಗ ಅವನು ತನ್ನ ಪ್ರಧಾನರ ಸಂಗಡಲೂ ಸಮಸ್ತ ರಥಗಳ ಸಂಗ ಡಲೂ ಹೊರಟು ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನೂ ರಥಗಳ ಅಧಿಪತಿಗಳನ್ನೂ ಸುತ್ತಿಕೊಂಡಿದ್ದ ಎದೋಮ್ಯರನ್ನು ಹೊಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋರಾಮನು ತನ್ನ ಸರದಾರರನ್ನೂ ಎಲ್ಲಾ ರಥಬಲವನ್ನೂ ಕೂಡಿಸಿಕೊಂಡು [ಯೊರ್ದನ್ ಹೊಳೆಯನ್ನು] ದಾಟಿದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲೇ ದಂಡೆತ್ತಿ ಹೋಗಿ ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು.
Kannada Bible (KNCL) BSI 2016
ಆಗ ಯೆಹೋರಾಮನು ತನ್ನ ಸರದಾರರನ್ನೂ ಎಲ್ಲ ರಥಬಲವನ್ನೂ ಕೂಡಿಸಿಕೊಂಡು ಜೋರ್ಡನ್ ನದಿಯನ್ನು ದಾಟಿದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲೇ ದಂಡೆತ್ತಿಹೋಗಿ ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋರಾಮನು ತನ್ನ ಪ್ರಧಾನರ ಸಂಗಡ, ಎಲ್ಲಾ ರಥಬಲವನ್ನು ತೆಗೆದುಕೊಂಡುಹೋಗಿ, ರಾತ್ರಿಯಲ್ಲಿ ಎದ್ದು, ತನ್ನನ್ನೂ, ತನ್ನ ರಥಗಳ ಅಧಿಪತಿಗಳನ್ನೂ ಸುತ್ತುವರೆದಿದ್ದ ಎದೋಮ್ಯರನ್ನು ಸೋಲಿಸಿದನು.