2 Chronicles 22:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅರಸನಾದ ಯೋರಾವುನ ಮಗಳಾದ ಯೆಹೋಷಬತಳು ಅಹಜ್ಯನ ಮಗನಾದ ಯೆಹೋವಾಷನನ್ನು ಅಡಗಿಸಿಟ್ಟಳು. ಆಕೆಯು ಅವನನ್ನೂ ಅವನ ದಾದಿಯನ್ನೂ ಒಳಗಿನ ಕೋಣೆಯಲ್ಲಿ ಅಡಗಿಸಿಟ್ಟಳು. ಆಕೆಯು ಯಾಜಕನಾದ ಯೆಹೋಯಾದನ ಹೆಂಡತಿಯಾಗಿದ್ದಳು. ಆಕೆಯು ಸಹ ಅಹಜ್ಯನ ಸೋದರಿ. ಯೆಹೋವಾಷನು ಅತಲ್ಯಳಿಗೆ ಸಿಗದೆಹೋದುದರಿಂದ ಬದುಕಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆಯು, ಹತರಾಗುತ್ತಿದ್ದ ರಾಜಪುತ್ರರ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷನನ್ನು, ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ಸಹೋದರಿಯೂ, ಯಾಜಕನಾದ ಯೆಹೋಯಾದನ ಹೆಂಡತಿಯೂ, ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.
Kannada BSI Bible 2016
ಆದರೆ ಅರಸನ ಮಗಳಾದ ಯೆಹೋಷಬತಳು ಅಹಜ್ಯನ ಮಗನಾದ ಯೆಹೋವಾಷನನ್ನು ತಕ್ಕೊಂಡು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅವನನ್ನು ಕದ್ದುಕೊಂಡು ಅವನನ್ನೂ ಅವನ ದಾದಿ ಯನ್ನೂ ಮಲಗುವ ಕೋಣೆಯಲ್ಲಿ ಇರಿಸಿದಳು. ಹೀಗೆ ಅತಲ್ಯಳು ಅವನನ್ನು ಕೊಲ್ಲದ ಹಾಗೆ ಅರಸನಾದ ಯೆಹೋರಾಮನ ಕುಮಾರ್ತೆಯಾಗಿರುವ ಯಾಜ ಕನಾದ ಯೆಹೋಯಾದನ ಹೆಂಡತಿಯಾಗಿರುವ ಯೆಹೋಷಬತಳು ಬಚ್ಚಿಟ್ಟಳು.ಹೀಗೆಯೇ ಇವನು ಅವರ ಸಂಗಡ ದೇವರ ಆಲಯದಲ್ಲಿ ಆರು ವರುಷ ಬಚ್ಚಿಟ್ಟುಕೊಂಡಿದ್ದನು. ಆದರೆ ಅತಲ್ಯಳು ದೇಶದ ಮೇಲೆ ಆಳುತ್ತಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆಯು ಹತರಾಗುವದಕ್ಕಿದ್ದ ರಾಜಪುತ್ರರ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷನನ್ನು ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಯಾಜಕನಾದ ಯೆಹೋಯಾದನ ಹೆಂಡತಿಯೂ ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.
Kannada Bible (KNCL) BSI 2016
ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆ, ಹತರಾಗುವುದಕ್ಕಿದ್ದ ರಾಜಪುತ್ರರ ಮಧ್ಯೆಯಿಂದ ಅಹಜ್ಯನ ಮಗ ಯೆಹೋವಾಷನನ್ನು, ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಯಾಜಕ ಯೆಹೋಯಾದನ ಹೆಂಡತಿಯೂ ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅರಸನಾದ ಯೆಹೋರಾಮನ ಮಗಳಾದ ಯೆಹೋಷಬತಳು, ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನನ್ನೂ ಅವನ ದಾದಿಯನ್ನೂ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು. ಹೀಗೆಯೇ ಅರಸನಾದ ಯೆಹೋರಾಮನ ಪುತ್ರಿಯರಾಗಿರುವ ಯಾಜಕನಾದ ಯೆಹೋಯಾದಾವನ ಹೆಂಡತಿಯಾಗಿರುವ ಅಹಜ್ಯನ ಸಹೋದರಿಯಾದ ಯೆಹೋಷಬತಳು, ಅತಲ್ಯಳು ಅವನನ್ನು ಕೊಲ್ಲದ ಹಾಗೆ ಬಚ್ಚಿಟ್ಟಳು.