2 Chronicles 22:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಹಾಬನ ಕುಟುಂಬದವರ ಸಲಹೆಯ ಮೇರೆಗೆ ಅಹಜ್ಯನು ರಾಜನಾದ ಯೋರಾವುನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನೊಂದಿಗೆ ಯುದ್ಧಮಾಡಲು ರಾಮೋತ್‌ಗಿಲ್ಯಾದ್ ಎಂಬ ಪಟ್ಟಣಕ್ಕೆ ಹೋದನು. ಯೋರಾವುನು ಇಸ್ರೇಲರ ಅರಸನಾದ ಅಹಾಬನ ಮಗನು. ಅರಾಮ್ಯರು ಯುದ್ಧದಲ್ಲಿ ಯೋರಾವುನನ್ನು ಗಾಯಗೊಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಪ್ರೇರಣೆಯಿಂದಲೇ ಅವನು ಇಸ್ರಾಯೇಲರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ, ರಾಮೋತ್ ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಿದರು.
Kannada BSI Bible 2016
ಅವನು ಇವರ ಯೋಚನೆಯ ಪ್ರಕಾರ ನಡೆದು ಗಿಲ್ಯಾದಿನಲ್ಲಿರುವ ರಾಮೋತಿನ ಬಳಿಯಲ್ಲಿ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧ ಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ನಾದ ಯೆಹೋರಾಮನ ಸಂಗಡ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಪ್ರೇರಣೆಯಿಂದ ಇಸ್ರಾಯೇಲ್ಯರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನಿಗೆ ವಿರುದ್ಧವಾಗಿ ಯುದ್ಧಮಾಡುವದಕ್ಕೆ ರಾಮೋತ್‍ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಲು ಅವನು ಆ ಗಾಯಗಳನ್ನು ಮಾಯಿಸಿಕೊಳ್ಳುವದಕ್ಕಾಗಿ ಇಜ್ರೇಲಿಗೆ ಬಂದನು.
Kannada Bible (KNCL) BSI 2016
ಆ ಪ್ರೇರಣೆಯಿಂದಲೇ ಇಸ್ರಯೇಲರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಸಿರಿಯಾದ ಅರಸ ಹಜಾಯೇಲನಿಗೆ ವಿರುದ್ಧ ಯುದ್ಧಮಾಡುವುದಕ್ಕೆ ರಾಮೋತ್‍ಗಿಲ್ಯಾದಿಗೆ ಹೋದನು. ಸಿರಿಯಾದವರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಹಜ್ಯನು ಇವರ ಯೋಚನೆಯ ಪ್ರಕಾರ ನಡೆದು, ಗಿಲ್ಯಾದಿನ ರಾಮೋತಿಗೆ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ಯೋರಾಮನ ಸಂಗಡ ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದು ಗಾಯಗೊಳಿಸಿದರು.