2 Chronicles 22:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಾಯವನ್ನು ವಾಸಿಮಾಡಿಸಿಕೊಳ್ಳಲು ಯೋರಾವುನು ಇಜ್ರೇಲಿಗೆ ಹೋದನು. ಅರಾಮ್ಯರ ರಾಜನಾದ ಹಜಾಯೇಲನೊಡನೆ ಯುದ್ಧಮಾಡುತ್ತಿರುವಾಗ ಯೋರಾವುನು ಗಾಯಗೊಂಡಿದ್ದನು. ಇಜ್ರೇಲಿನಲ್ಲಿ ಅಸ್ವಸ್ಥನಾಗಿದ್ದ ಯೋರಾವುನನ್ನು ಸಂಧಿಸಲು ಯೆಹೂದ್ಯರ ಅರಸನೂ ಯೆಹೋರಾಮನ ಮಗನೂ ಆಗಿರುವ ಅಹಜ್ಯನು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಾಮ್ಯರು ಯೋರಾಮನಿಗೆ ರಾಮದಲ್ಲಿ ಮಾಡಿದ ಗಾಯಗಳಿಗೆ ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕಾಗಿ ಅವನು ಇಜ್ರೇಲಿಗೆ ಬಂದನು. ಯೋರಾಮನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗನಾಗಿರುವ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.
Kannada BSI Bible 2016
ಆದರೆ ಅರಾಮ್ಯರು ಯೆಹೋರಾಮನನ್ನು ಹೊಡೆದರು. ಅವನು ಅರಾಮಿನ ಹಜಾಯೇಲನ ಸಂಗಡ ಯುದ್ಧ ಮಾಡುವಾಗ ರಾಮದಲ್ಲಿ ಗಾಯಗಳನ್ನು ಹೊಂದಿದ್ದ ರಿಂದ ಇಜ್ರೇಲಿನಲ್ಲಿ ಗುಣಮಾಡಿಕೊಳ್ಳಲು ತಿರಿಗಿದನು. ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಇಜ್ರೇಲಿನಲ್ಲಿರುವ ಅಹಾ ಬನ ಮಗನಾದ ಯೆಹೋರಾಮನನ್ನು ನೋಡಲು ಬಂದನು; ಯಾಕಂದರೆ ಇವನು ರೋಗಸ್ಥನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅಸ್ವಸ್ಥನಾಗಿದ್ದದರಿಂದ ಯೆಹೂದ್ಯರ ಅರಸನಾದ ಯೆಹೋರಾಮನಿಗೆ ಮಗನಾಗಿರುವ ಅಹಜ್ಯನು ಅವನನ್ನು ನೋಡುವದಕ್ಕೋಸ್ಕರ ಅಲ್ಲಿಗೆ ಹೋದನು.
Kannada Bible (KNCL) BSI 2016
ಆ ಗಾಯಗಳನ್ನು ಮಾಯಿಸಿಕೊಳ್ಳುವುದಕ್ಕಾಗಿ ಅವನು ಜೆಸ್ರೀಲಿಗೆ ಬಂದನು. ಅವನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡುವುದಕ್ಕೆ ಅಲ್ಲಿಗೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಅವನು ಅರಾಮ್ಯ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ, ರಾಮೋತಿನಲ್ಲಿ ತನ್ನನ್ನು ಹೊಡೆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕೆ ಇಜ್ರೆಯೇಲ್ ಪಟ್ಟಣಕ್ಕೆ ತಿರುಗಿಹೋದನು. ಆಗ ಅಹಾಬನ ಮಗ ಯೋರಾಮನು ಇಜ್ರೆಯೇಲಿನಲ್ಲಿ ಅಸ್ವಸ್ಥನಾಗಿದ್ದುದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗ ಅಜರ್ಯನು ಅವನನ್ನು ನೋಡಲು ಹೋದನು.