2 Chronicles 22:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋರಾವುನನ್ನು ಸಂಧಿಸಲು ಹೋದಾಗ ಅಹಜ್ಯನು ಕೊಲ್ಲಲ್ಪಡುವಂತೆ ಯೆಹೋವನು ಮಾಡಿದನು. ಅಹಜ್ಯನು ಯೇಹುವನ್ನು ಭೇಟಿಯಾಗಲು ಯೋರಾವುನೊಂದಿಗೆ ಹೋದನು. ಯೇಹುವಿನ ತಂದೆ ನಿಂಷಿ. ಅಹಾಬನ ಕುಟುಂಬವನ್ನು ನಾಶಗೊಳಿಸಲು ಯೆಹೋವನು ಯೇಹುವನ್ನು ಆರಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹಜ್ಯನು ಯೋರಾಮನ ಬಳಿಗೆ ಹೋದದ್ದು ದೈವಸಂಕಲ್ಪದಿಂದಲೇ. ಅವನು ಅಲ್ಲಿ ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗನಾದ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಯೆಹೋವನು ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ಪಟ್ಟಾಭಿಷೇಕ ಮಾಡಿಸಿದ್ದನು.
Kannada BSI Bible 2016
ಯೆಹೋರಾಮನ ಬಳಿಗೆ ಅವನು ಬಂದದ್ದರಿಂದ ಅಹಜ್ಯನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗಂದರೆ ಅವನು ಬಂದ ತರುವಾಯ ಕರ್ತನು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗನಾದ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹಜ್ಯನು ಯೋರಾಮನ ಬಳಿಗೆ ಹೋಗಿ ನಾಶವಾದದ್ದು ದೈವಯೋಗದಿಂದಲೇ. ಅವನು ಅಲ್ಲಿ ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗನಾದ ಯೇಹುವನ್ನು ಎದುರುಗೊಳ್ಳುವದಕ್ಕೆ ಹೋದನು. ಯೆಹೋವನು ಅಹಾಬನ ಮನೆಯನ್ನು ನಿರ್ನಾಮಮಾಡುವದಕ್ಕೋಸ್ಕರ ಯೇಹುವಿಗೆ ರಾಜ್ಯಾಭಿಷೇಕ ಮಾಡಿಸಿದ್ದನು.
Kannada Bible (KNCL) BSI 2016
ಅಹಜ್ಯನು ಯೋರಾಮನ ಬಳಿಗೆ ಹೋಗಿ ನಾಶವಾದದ್ದು ದೈವಸಂಕಲ್ಪದಿಂದಲೇ. ಅವನು ಆ ಸ್ಥಳವನ್ನು ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಸರ್ವೇಶ್ವರ ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ರಾಜಾಭಿಷೇಕ ಮಾಡಿಸಿ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋರಾಮನ ಬಳಿಗೆ ಅಹಜ್ಯನು ಬಂದಿದ್ದರಿಂದ ಅವನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗೆಂದರೆ, ಅಹಜ್ಯನು ಬಂದ ತರುವಾಯ ಯೆಹೋವ ದೇವರು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟರು.