2 Chronicles 23:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೇರಿಬಂದವರು ಎಲ್ಲೆಲ್ಲಿ ನಿಲ್ಲಬೇಕೆಂದು ಯೆಹೋಯಾದನು ಸೂಚಿಸಿದನು. ಪ್ರತಿಯೊಬ್ಬರ ಕೈಯಲ್ಲಿ ಆಯುಧಗಳಿದ್ದವು. ದೇವಾಲಯದ ಎಡಬಲಗಳಲ್ಲಿ ಜನರು ನಿಂತಿದ್ದರು. ಯಜ್ಞವೇದಿಕೆಯ ಬಳಿ, ದೇವಾಲಯದ ಬಳಿ ಮತ್ತು ಅರಸನ ಬಳಿಯಲ್ಲಿ ಅವರು ನಿಂತರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಯುಧಪಾಣಿಗಳಾದ ಎಲ್ಲಾ ಜನರನ್ನು ಅರಸನ ಸುತ್ತಲೂ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯ ವರೆಗೂ ಸಾಲಾಗಿ ನಿಲ್ಲಿಸಿದನು.
Kannada BSI Bible 2016
ಅರಸನ ಸುತ್ತಲೂ ಇರುವದಕ್ಕೆ ಬಲಿಪೀಠಕ್ಕೂ ಆಲಯಕ್ಕೂ ಎದುರಾಗಿ ಆಲಯದ ಬಲಪಾರ್ಶ್ವ ಮೊದಲುಗೊಂಡು ಆಲಯದ ಎಡಪಾರ್ಶ್ವದ ವರೆಗೂ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ತನ್ನ ಆಯುಧ ಹಿಡಿದವರಾಗಿ ಸಮಸ್ತ ಜನರನ್ನೂ ಇರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಯುಧಪಾಣಿಗಳಾದ ಎಲ್ಲಾ ಜನರನ್ನು ಅರಸನ ಸುತ್ತಲೂ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯವರೆಗೂ ಅಲ್ಲಿಂದ ಉತ್ತರದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಲ್ಲಿಸಿದನು.
Kannada Bible (KNCL) BSI 2016
ಆಯುಧಪಾಣಿಗಳಾದ ಎಲ್ಲ ಜನರನ್ನು ಅರಸನ ಸುತ್ತಲು ದೇವಾಲಯದ ದಕ್ಷಿಣದಿಕ್ಕಿನ ಮೂಲೆಯಿಂದ ಬಲಿಪೀಠದವರೆಗೂ ಅಲ್ಲಿಂದ ಉತ್ತರದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಲ್ಲಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಯುಧಗಳನ್ನು ಕೈಯಲ್ಲಿ ಹಿಡಿದುಕೊಂಡಿದ್ದ ಸಮಸ್ತ ಜನರನ್ನೂ ಬಲಿಪೀಠದ ಬಳಿಯಲ್ಲಿಯೂ, ಆಲಯದ ಬಳಿಯಲ್ಲಿಯೂ, ಆಲಯದ ಬಲಗಡೆಯ ಮೊದಲುಗೊಂಡು ಆಲಯದ ಎಡಗಡೆಯವರೆಗೂ ಅರಸನ ಸುತ್ತಲೂ ಇರಿಸಿದನು.