2 Chronicles 23:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಮುಂಭಾಗದ ಪ್ರವೇಶ ದ್ವಾರದಲ್ಲಿದ್ದ ರಾಜಸ್ತಂಭದ ಬಳಿ ನಿಂತಿದ್ದನು. ಸೇನಾಧಿಪತಿಗಳೂ ಅವರ ಜನರೂ ತುತ್ತೂರಿಯನ್ನು ಊದಿ ರಾಜನ ಬಳಿಯಲ್ಲಿಯೇ ನಿಂತಿದ್ದರು. ದೇಶದ ಪ್ರಜೆಗಳು ಸಂತೋಷದಿಂದ ತುತ್ತೂರಿಯನ್ನೂದಿದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಿದ್ದರು. ಅವರು ಜನರನ್ನು ಸ್ತೋತ್ರಗೀತೆಯಲ್ಲಿ ನಡಿಸುತ್ತಿದ್ದರು. ಇದೆಲ್ಲವನ್ನು ಅತಲ್ಯಳು ನೋಡಿ ತನ್ನ ಬಟ್ಟೆಯನ್ನು ಹರಿದು, “ದ್ರೋಹ, ದ್ರೋಹ” ಎಂದು ಕಿರುಚಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ” ಎಂದು ಕೂಗಿದಳು.
Kannada BSI Bible 2016
ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಅರಸನು ಬಾಗಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನರ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆಯು ಬಟ್ಟೆಗಳನ್ನು ಹರಿದುಕೊಂಡು - ದ್ರೋಹ, ದ್ರೋಹ ಎಂದು ಕೂಗಿದಳು.
Kannada Bible (KNCL) BSI 2016
ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತೂರಿಗಳನ್ನು ಊದುವವರು ಅರಸನ ಹತ್ತಿರವಿದ್ದರು; ಜನಸಾಮಾನ್ಯರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನಪದ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆ ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು.