2 Chronicles 23:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕನಾದ ಯೆಹೋಯಾದನು ಸೈನ್ಯಾಧಿಕಾರಿಗಳನ್ನು ಹೊರತಂದು, “ಅತಲ್ಯಳನ್ನು ಹೊರಗೆ ಎಳೆದುಕೊಂಡು ಹೋಗಿ, ಯಾರಾದರೂ ಆಕೆಯನ್ನು ಹಿಂಬಾಲಿಸಿದರೆ ಖಡ್ಗದಿಂದ ಅವರನ್ನು ಸಂಹರಿಸಿರಿ” ಎಂದು ಹೇಳಿದನು. ಆಗ ಯಾಜಕರು ಸಿಪಾಯಿಗಳಿಗೆ, “ಅತಲ್ಯಳನ್ನು ದೇವಾಲಯದೊಳಗೆ ಕೊಲ್ಲಬೇಡಿ” ಎಂದು ಎಚ್ಚರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.
Kannada BSI Bible 2016
ಆಗ ಯಾಜಕನಾದ ಯೆಹೋ ಯಾದನು ಸೈನ್ಯದ ಮೇಲೆ ಇರುವ ಶತಾಧಿಪತಿಗ ಳನ್ನು ಹೊರಗೆ ಕರತಂದು ಅವರಿಗೆ--ಅವಳನ್ನು ಸಾಲುಗಳ ಹೊರಗೆ ಹೊರಡಿಸಿರಿ, ಅವಳನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಂದುಹಾಕಿರಿ ಅಂದನು. ಯಾಕಂದರೆ ಕರ್ತನ ಆಲಯದಲ್ಲಿ ಅವ ಳನ್ನು ಕೊಲ್ಲಬೇಡಿರಿ ಎಂದು ಯಾಜಕನು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರಕೊಂಡು ಹೋಗಿ ಅವರಿಗೆ - ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
ಆಗ ಯಾಜಕ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ,” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳನ್ನು ಹೊರಗೆ ಕರೆತಂದು ಅವರಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.