2 Chronicles 23:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನಂತರ ಯೆಹೋಯಾದನು ಅರಸನೊಂದಿಗೂ ನೆರೆದು ಬಂದಿದ್ದ ಎಲ್ಲಾ ಜನರೊಂದಿಗೂ ಒಪ್ಪಂದವನ್ನು ಮಾಡಿಕೊಂಡನು. ಅವರೆಲ್ಲರೂ ಯೆಹೋವನ ಜನರಾಗಿ ಜೀವಿಸುವದಕ್ಕೆ ಒಪ್ಪಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ನಂತರ ಯೆಹೋಯಾದನು ಎಲ್ಲಾ ಜನರನ್ನೂ, ಅರಸನನ್ನೂ ಪ್ರೇರೇಪಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣ ಮಾಡಿದನು.
Kannada BSI Bible 2016
ಆಗ ಅವರು ಕರ್ತನ ಜನರಾಗಿರುವ ಹಾಗೆ ಯೆಹೋಯಾದನು ತನಗೂ ಸಮಸ್ತ ಜನರಿಗೂ ಅರಸ ನಿಗೂ ಒಡಂಬಡಿಕೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಯೆಹೋಯಾದನು ಎಲ್ಲಾ ಜನರನ್ನೂ ಅರಸನನ್ನೂ ಪ್ರೇರಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣಮಾಡಿದನು.
Kannada Bible (KNCL) BSI 2016
ಅನಂತರ ಯೆಹೋಯಾದನು ಎಲ್ಲ ಜನರನ್ನೂ ಅರಸನನ್ನೂ ಪ್ರೇರಿಸಿ ತಾವೆಲ್ಲರೂ ಸರ್ವೇಶ್ವರನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ತನಗೂ, ಸಮಸ್ತ ಜನರಿಗೂ, ಅರಸನಿಗೂ ಒಡಂಬಡಿಕೆ ಮಾಡಿಸಿದನು.