2 Chronicles 23:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಯೆಹೂದ ರಾಜ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿದ್ದ ಲೇವಿಯರನ್ನು ಒಟ್ಟಾಗಿ ಸೇರಿಸಿದರು. ಅಲ್ಲದೆ ಗೋತ್ರಪ್ರಧಾನರನ್ನೂ ಒಟ್ಟಾಗಿ ಸೇರಿಸಿ, ಅವರನ್ನು ಜೆರುಸಲೇಮಿಗೆ ಕರೆದುಕೊಂಡು ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ಯೆಹೂದದಲ್ಲೆಲ್ಲಾ ಸಂಚರಿಸಿ ಎಲ್ಲಾ ಪಟ್ಟಣಗಳಿಂದ ಲೇವಿಯರನ್ನೂ, ಇಸ್ರಾಯೇಲರ ಗೋತ್ರ ಪ್ರಧಾನರನ್ನೂ ಒಟ್ಟುಗೂಡಿಸಲು ಅವರು ಯೆರೂಸಲೇಮಿಗೆ ಬಂದರು.
Kannada BSI Bible 2016
ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿ ಯರನ್ನೂ ಇಸ್ರಾಯೇಲಿನ ಮುಖ್ಯಸ್ಥರಾದ ಪಿತೃಗಳನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಯೆಹೂದದಲ್ಲೆಲ್ಲಾ ಸಂಚರಿಸಿ ಎಲ್ಲಾ ಪಟ್ಟಣಗಳಿಂದ ಲೇವಿಯರನ್ನೂ ಇಸ್ರಾಯೇಲ್ಯರ ಗೋತ್ರಪ್ರಧಾನರನ್ನೂ ಕೂಡಿಸಲು ಅವರು ಯೆರೂಸಲೇವಿುಗೆ ಬಂದರು.
Kannada Bible (KNCL) BSI 2016
ಇವರು ಜುದೇಯದಲ್ಲೆಲ್ಲಾ ಸಂಚರಿಸಿ ಎಲ್ಲ ಪಟ್ಟಣಗಳಿಂದ ಲೇವಿಯರನ್ನೂ ಇಸ್ರಯೇಲರ ಗೋತ್ರಪ್ರಧಾನರನ್ನೂ ಕೂಡಿಸಿದರು. ಅವರೆಲ್ಲರು ಜೆರುಸಲೇಮಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿಯರನ್ನೂ, ಇಸ್ರಾಯೇಲಿನ ಕುಟುಂಬದಲ್ಲಿ ಮುಖ್ಯಸ್ಥರನ್ನೂ ಕೂಡಿಸಿಕೊಂಡು, ಯೆರೂಸಲೇಮಿಗೆ ಬಂದರು.